×
Ad

ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ 6 ಜನರ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

Update: 2023-01-01 20:52 IST

ಬೆಂಗಳೂರು, ಜ.1: ವ್ಯಕ್ತಿಯೊರ್ವ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ನಿಗೂಢ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೂ ಮುನ್ನ ಡೆತ್‍ನೋಟ್‍ನಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿ ಆರು ಮಂದಿಯ ಹೆಸರು ಉಲ್ಲೇಖಿಸಿದ್ದಾನೆ ಎಂದು ವರದಿಯಾಗಿದೆ.

ಬೆಂಗಳೂರು ದಕ್ಷಿಣ ತಾಲೂಕಿನ ನೆಟ್ಟಿಗೆರೆ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಎಚ್‍ಎಸ್‍ಆರ್ ಲೇಔಟ್ ನಿವಾಸಿ 47 ವರ್ಷದ ಪ್ರದೀಪ್ ಆತ್ಮಹತ್ಯೆ ಮಾಡಿಕೊಂದ್ದಾನೆ ಎಂದು ಕಗ್ಗಲಿಪುರ ಠಾಣಾ ಪೊಲೀಸರು ಗುರುತಿಸಿದ್ದಾರೆ. 

ಪ್ರದೀಪ್ ಪ್ರಭಾವಿ ರಾಜಕಾರಣಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಆರು ಜನರ ಹೆಸರನ್ನು ಡೆತ್‍ನೋಟ್‍ನಲ್ಲಿ ಉಲ್ಲೇಖಿಸಿದ್ದಾರೆ ಎಂದು ಹೇಳಲಾಗಿದ್ದು, ಕಾರಿನಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ನಿಗೂಢ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಘಟನೆ ಸಂಬಂಧ ಕಗ್ಗಲಿಪುರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

Similar News