ವ್ಯಕ್ತಿ ಆತ್ಮಹತ್ಯೆ ಪ್ರಕರಣ: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿ 6 ಮಂದಿ ವಿರುದ್ಧ FIR
ಬೆಂಗಳೂರು, ಜ.2: ರವಿವಾರ ವ್ಯಕ್ತಿಯೋರ್ವ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿ 6 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಅರವಿಂದ ಲಿಂಬಾವಳಿ ಸೇರಿದಂತೆ ಆರು ಜನರ ವಿರುದ್ಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 306ರಡಿ (ಆತ್ಮಹತ್ಯೆಗೆ ಪ್ರಚೋದನೆ) ಎಫ್ಐಆರ್ ದಾಖಲಾಗಿದೆ.
ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ನಿಗೂಢ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರದೀಪ್, ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಆರು ಜನರ ಹೆಸರನ್ನು ಡೆತ್‍ನೋಟ್‍ನಲ್ಲಿ ಉಲ್ಲೇಖಿಸಿದ್ದಾರೆಂದು ಹೇಳಲಾಗಿದೆ.
ಡೆತ್‍ನೋಟ್‍ನಲ್ಲಿ ಏನಿದೆ?: ಎಚ್‍ಎಸ್‍ಆರ್ ಲೇಔಟ್ ಬಳಿ ರೆಸಾರ್ಟ್ ತೆರೆಯಲು ಐದು ಮಂದಿ ನನ್ನ ಬಳಿ ಮಾತುಕತೆ ನಡೆಸಿದ್ದರು. ಆದರಂತೆ ಒಂದೂವರೆ ಕೋಟಿ ಹಣ ಪಡೆದುಕೊಂಡಿದ್ದರು. ನನ್ನನ್ನುಪಾಲುದಾರನನ್ನಾಗಿ ಮಾಡಿಕೊಳ್ಳುವುದಾಗಿ ಭರವಸೆನೀಡಿದ್ದರು. ಹೀಗಾಗಿ ಮನೆಮಾರುವುದರ ಜೊತೆಗೆಸಾಕಷ್ಟುಸಾಲಮಾಡಿಕೊಂಡಿದ್ದೆ.
ಆದರೆ, ಪಾಲುದಾರಿಕೆ ಹೆಸರಿನಲ್ಲಿ ಪಾಲುದಾರರೇ ನನಗೆ ಮೋಸ ಮಾಡಿದ್ದಾರೆ. ನನಗೆ ಒಟ್ಟು ಎರಡೂವರೆ ಕೋಟಿ ರೂ.ಹಣ ಬರಬೇಕಿತ್ತು. ಈ ಮಧ್ಯೆ ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ರಾಜಿ ಮಾಡುವ ಪ್ರಯತ್ನ ಮಾಡಿ ತಿಂಗಳಿಗೆ ಒಂದು ಲಕ್ಷ ರೂ.ನಂತೆ ಒಂಬತ್ತು ತಿಂಗಳು ಹಣ ನೀಡುವಂತೆ ಮಾತುಕತೆ ನಡೆಸಿ ಒಪ್ಪಿಸಿದ್ದರು.
ಅದರಂತೆ ಕೇವಲ 9 ಲಕ್ಷ ರೂ.ಹಣವಷ್ಟೇ ವಾಪಸ್ ಬಂದಿದೆ. ಆನಂತರ ಲಿಂಬಾವಳಿ ಅವರು ನನಗೆ ಸಹಾಯ ಮಾಡಿಲ್ಲ ಎಂದು ಡೆತ್‍ನೋಟ್‍ನಲ್ಲಿ ಪ್ರದೀಪ್ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ 6 ಜನರ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ