×
Ad

ರಂಗಾಯಣದಲ್ಲಿ ಪ್ರದರ್ಶನಗೊಂಡ ನಾಟಕದಲ್ಲಿ ಸಿದ್ದರಾಮಯ್ಯಗೆ ಅವಹೇಳನ ಆರೋಪ: ದೂರು ದಾಖಲು

Update: 2023-01-02 13:07 IST

ಮೈಸೂರು: ಇಲ್ಲಿನ ರಂಗಾಯಣದಲ್ಲಿ ಪ್ರದರ್ಶನ ಕಂಡ ಸಾಂಬಶಿವನ ಪ್ರದರ್ಶನ ಎಂಬ ನಾಟಕದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ದೂರು ಸಲ್ಲಿಕೆಯಾಗಿದೆ.  

ರಂಗಾಯಣದ ರಂಗ ಕಾರ್ಯಾಗಾರದ ಶಿಬಿರಾರ್ಥಿಗಳ ವಿರುದ್ಧ ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ಎಂಬುವರು ದೂರು ನೀಡಿದ್ದು,  ರಂಗಾಯಣದ ಭೂಮಿಗೀತದ ರಂಗಮಂದಿರದಲ್ಲಿ ಡಿ.31ರ ಸಂಜೆ 6.30 ಗಂಟೆಗೆ ಸಾಂಬಶಿವನ ಪ್ರಹಸನ ನಾಟಕ ಪ್ರದರ್ಶನ ಏರ್ಪಡಿಸಲಾಗಿತ್ತು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರರು ರಚಿಸಿರುವ ಕಾರ್ತಿಕ್ ಉಪಮನ್ಯು ನಿರ್ದೇಶನದ ಈ ನಾಟಕದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರು ತಮ್ಮ ಆಡಳಿತಾವಧಿಯಲ್ಲಿ ರಾಜ್ಯದ ಜನತೆಗೆ ಭಾಗ್ಯಗಳನ್ನು ನೀಡಿ ಸೋಮಾರಿ ಮಾಡುತ್ತಿದ್ದೀರಿ, ಬರೀ ನಿದ್ದೆ ಮಾಡುತ್ತಿದ್ದೀರಿ ಎಂದೆಲ್ಲ ಹೇಳಿಸುವ ಮೂಲಕ ಸಿದ್ದರಾಮಯ್ಯ ಅವರನ್ನು ವ್ಯಂಗ್ಯ ಮಾಡುತ್ತಿದ್ದೀರಿ. ಮೂಲ ನಾಟಕದಲ್ಲಿ ಹೀಗಿದೆಯೇ? ದುರುದ್ದೇಶಪೂರ್ವಕವಾಗಿ ನಾಟಕ ರೂಪಿಸಿದ್ದೀರಿ’ ಎಂದು ಅವಹೇಳನ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. 

ಡಿ.31ರಂದು ರಂಗಾಯಣದಲ್ಲಿ ನಾಟಕ  ಪ್ರದರ್ಶನ ವೇಳೆ ಪ್ರೇಕ್ಷಕರ ಸಾಲಿನಲ್ಲಿ ಇದ್ದ ಸಿದ್ದರಾಮಯ್ಯ ಅವರ  ಅಭಿಮಾನಿಯೊಬ್ಬರು ಸ್ಥಳದಲ್ಲೇ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ವೀಡಿಯೋ ನೋಡಿದ ಕರ್ನಾಟಕ ಕುರುಬರ ಸಂಘದ ರಾಜ್ಯಾಧ್ಯಕ್ಷ ಬಿ.ಸುಬ್ರಮಣ್ಯ, ಆಯೋಜಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ದೂರು ನೀಡಿದ್ದಾರೆ.

ಇದನ್ನೂ ಓದಿ: ಗೋಮೂತ್ರ ಶ್ರೇಷ್ಠವಾಗಿದ್ದರೆ ನೀವೇ ಕುಡಿಯಿರಿ, ನಮ್ಮನ್ನು ಸ್ವಚ್ಛವಾಗಿರಲು ಬಿಡಿ: ನಟ ಪ್ರಕಾಶ್ ರಾಜ್

Similar News