ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿಯ ಕೊಲೆ
Update: 2023-01-02 19:06 IST
ಬೆಂಗಳೂರು, ಜ.1: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿಯೊರ್ವನನ್ನು ಕೊಲೆಗೈದಿರುವ ಘಟನೆ ಇಲ್ಲಿನ ದೇವನಹಳ್ಳಿ ತಾಲೂಕಿನ ಬುಳ್ಳಹಳ್ಳಿ ಗೇಟ್‍ಬಳಿನಡೆದಿದೆ.
ಸೋಮವರ ಬೆಳಗ್ಗೆ ತೋಟಕ್ಕೆ ತೆರಳುತ್ತಿದ್ದ ಆವತಿ ಗ್ರಾಮದ ಅನಿಲ್ ಕುಮಾರ್ ಎಂಬುವರು ಮೃತದೇಹ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಗಂಭೀರ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಇನ್ನೂ, ಬೇರೆಡೆ ಕೊಲೆ ಮಾಡಿ ಶವ ಇಲ್ಲಿಗೆ ಹಾಕಿರುವ ಸಾಧ್ಯತೆ ಇದೆ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.