ಕಿನ್ನಿಗೋಳಿ: ಬಸ್ ಢಿಕ್ಕಿಯಾಗಿ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು
Update: 2023-01-02 19:52 IST
ಕಿನ್ನಿಗೋಳಿ: ವಿದ್ಯಾರ್ಥಿಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಿನ್ನಿಗೋಳಿ- ಉಲ್ಲಂಜೆ ರಸ್ತೆಯ ಮಲ್ಲಿಗೆಯಂಗಡಿ ಬಳಿ ವರದಿಯಾಗಿದೆ.
ಮೃತ ಬಾಲಕನನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಔಿದ್ಯ ಉಲ್ಲಂಜೆ ನಿವಾಸಿ ಚರಣ್ ಎಂದು ಗುರುತಿಸಲಾಗಿದೆ.
ಚರಣ್ ಶಾಲೆಬಿಟ್ಟು ಉಲ್ಲಂಜೆಯ ಮನೆ ಕಡೆಗೆ ನಡೆದುಕೊಂಡು ಬರುತ್ತಿದ್ದಾಗ ಕಿನ್ನಿಗೋಳಿಯಿಂದ ಕಟೀಲು ಕಡೆ ತೆರಳುತ್ತಿದ್ದ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಬಾಲಕ ಚರಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಮೂಲ್ಕಿ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಮಂಗಳೂರು ಉತ್ತರ ವಿಭಾಗದ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಬೆಂಗಳೂರು: ಚಾಕುವಿನಿಂದ ಇರಿದು ವಿದ್ಯಾರ್ಥಿನಿಯ ಕೊಲೆಗೈದು ಆತ್ಮಹತ್ಯೆಗೆ ಯತ್ನಿಸಿದ ಯುವಕ