ಉಡುಪಿ ಜಿಲ್ಲೆಯ ವಿವಿದೆಡೆ ಜ. 3 ಮತ್ತು 5ರಂದು ವಿದ್ಯುತ್ ವ್ಯತ್ಯಯ

Update: 2023-01-02 14:53 GMT

ಉಡುಪಿ: 110/11ಕೆವಿ ನಂದಿಕೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ 11ಕೆವಿ ಎರ್ಮಾಳು, ನಂದಿಕೂರು ಮತ್ತು ಸಾಂತೂರು ಫೀಡರ್‌ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.5ರಂದು ಈ ಕೆಳಕಂಡ ಪ್ರದೇಶಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 5:00ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಎರ್ಮಾಳು, ತೆಂಕ, ಪೂಂದಾಡು, ಅದಮಾರು, ಹೆಜಮಾಡಿ, ಅವರಾಲು, ನಡ್ಸಾಲು, ನಂದಿಕೂರು, ಎನ್.ಎಸ್.ರೋಡ್, ಪಡುಬಿದ್ರೆ, ಎಸ್.ಎಸ್ ರೋಡ್, ಡೌನ್‌ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 5ರವರೆಗೆ.

ಅಲ್ಲದೇ 110/11ಕೆವಿ ಮಧುವನ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11ಕೆವಿ ಬಾರ್ಕೂರು ಎಕ್ಸ್‌ಪ್ರೆಸ್ ಫೀಡರ್ ಮಾರ್ಗದಲ್ಲಿ ರಸ್ತೆ ಅಗಲೀಕರಣ ಪ್ರಯುಕ್ತ ಹೆಚ್‌ಟಿ/ಎಲ್‌ಟಿ ವಿದ್ಯುತ್ ಮಾರ್ಗ ಸ್ಥಳಾಂತರ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಸಾಳ, ಕಚ್ಚೂರು, ರಂಗನಕೆರೆ, ಹೇರಾಡಿ, ಹನೆಹಳ್ಳಿ, ಕೂರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಂದು ಬೆಳಗ್ಗೆ 9:30ರಿಂದ ಸಂಜೆ 5:30ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

ಜ.3ರಂದು: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜನವರಿ 3ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
220/110/11ಕೆವಿ ಕೇಮಾರ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಫೀಡರ್‌ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್ ಸಪ್ಲಯ್, 110ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11ಕೆವಿ ಪದವು ಫೀಡರ್ ಹಾಗೂ 110ಕೆವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಫೀಡರ್‌ಗಳಾದ ಮುಂಡ್ಕೂರು, ನಂದಳಿಕೆ, ಬೋಳ ಮತ್ತು ಬೆಳ್ಮಣ್ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅದರ ವ್ಯಾಪ್ತಿಯ ಪ್ರದೇಶಗಳಲ್ಲಿ ಜ.3ರಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಶಿರ್ವ ಎಂಯುಎಸ್‌ಎಸ್ ನಲ್ಲಿ ರೀ-ಕಂಡಕ್ಟರಿಂಗ್ ಮತ್ತು ಉಪಕೇಂದ್ರದ ಒಳಗೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್ ಮಾರ್ಗದ ಪ್ರದೇಶಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/33/11ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಇಂಡಸ್ಟ್ರಿಯಲ್ ಕೆಎಂಎಫ್ ಮತ್ತು ಮಣಿಪಾಲ ಟೌನ್ ಫೀಡರಿನಲ್ಲಿ ಹಾಗೂ 110/33/11ಕೆವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಿಂದ ಹೊರಡುವ 11ಕೆವಿ ಹಿರಿಯಡ್ಕ, ಪೆರ್ಡೂರು, ಹಿರೇಬೆಟ್ಟು ಫೀಡರಿನಲ್ಲಿ ಮೆಂಟೆನೆನ್ಸ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಇದರ ವ್ಯಾಪ್ತಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/33/11ಕೆವಿ ಕುಂದಾಪುರ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಅಂಪಾರು, ಬಳ್ಕೂರು ಮತ್ತು ಜಪ್ತಿ ವಾಟರ್ ಸಪ್ಲಯ್ ಮಾರ್ಗ ದಲ್ಲಿ ಮರದ ಗೆಲ್ಲು ಕಡಿಯುವ ಮತ್ತು ಮಾರ್ಗ ನಿರ್ವಹಣಾ ಕಾಮಗಾರಿ ಯನ್ನು ಹಮ್ಮಿಕೊಂಡಿರುವುದರಿಂದ ಇದರ ವ್ಯಾಪ್ತಿಯ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Similar News