×
Ad

ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣ: #ArrestLimbavali ಅಭಿಯಾನ ಆರಂಭಿಸಿದ ಕಾಂಗ್ರೆಸ್

Update: 2023-01-03 16:01 IST

ಬೆಂಗಳೂರು, ಜ.3: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರು ಸೇರಿ 6 ಮಂದಿಯ ಹೆಸರನ್ನು ಡೆತ್‍ನೋಟ್‍ ನಲ್ಲಿ ಬರೆದಿಟ್ಟು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸದಂತೆ ಮಹದೇವ ಪುರ ವಿಧಾನ ಸಭೆ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದೆ. 

ಟ್ವಿಟರ್ ನಲ್ಲಿ #ArrestLimbavali ಎನ್ನುವ ಹ್ಯಾಷ್‌ ಟ್ಯಾಗ್‌ ಬಳಕೆ ಮಾಡಿ ಟ್ವೀಟ್ ಮಾಡಿರುವ ಕಾಂಗ್ರೆಸ್, @INCKarnataka  ''ಪ್ರದೀಪ್ ಆತ್ಮಹತ್ಯೆಯಲ್ಲಿ ಅರವಿಂದ್ ಲಿಂಬಾವಳಿ ಅವರ ಪಾತ್ರವೇನು ಎಂಬುದರ ಕುರಿತ ತನಿಖೆಗೆ ಮುಂದಾಗುತ್ತಿಲ್ಲವೇಕೆ? ಶಾಸಕರೂ ಪ್ರದೀಪ್‌ಗೆ ವಂಚಿಸಿದವರ ಜೊತೆ ಸೇರಿ ದ್ರೋಹವೆಸಗಿದ ಗುಮಾನಿಗಳಿವೆ, ಅರವಿಂದ್ ಲಿಂಬಾವಳಿ ಪ್ರಭಾವ ಬಳಸಿ ಸಾಕ್ಷ್ಯ ನಾಶಪಡಿಸುವ ಸಾಧ್ಯತೆಗಳಿದ್ದರೂ ಬಂಧನಕ್ಕೆ ಹಿಂದೇಟು ಹಾಕುತ್ತಿರುವುದೇಕೆ?'' ಎಂದು ಪ್ರಶ್ನೆ ಮಾಡಿದೆ. 

ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ, ' ಉದ್ಯಮಿ ಪ್ರದೀಪ್ ಅವರ ಆತ್ಮಹತ್ಯೆ ದುರದೃಷ್ಟಕರ. ಅವರ ಆತ್ಮಹತ್ಯೆಗೆ ಕಾರಣರಾದ ಶಾಸಕ ಅರವಿಂದ ಲಿಂಬಾವಳಿ ಸಹಿತ ಇತರೆ ಎಲ್ಲಾ ಆರೋಪಿಗಳನ್ನು ಈ ಕೂಡಲೇ ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಆದೇಶ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಅವರನ್ನು ಒತ್ತಾಯಿಸುತ್ತೇನೆ. ದಿವಂಗತ ಪ್ರದೀಪ್ ಅವರು ಉದ್ಯಮವೊಂದಕ್ಕೆ ಸುಮಾರು 1.5 ಕೋಟಿ ರೂಪಾಯಿ ಬಂಡವಾಳ ಹೂಡಿದ್ದರು, ಆದರೆ ಈ ವರೆಗೆ ನಯಾಪೈಸೆ ಲಾಭದ ಹಣ ಅವರ ಕೈಸೇರಿಲ್ಲ. ಈ ವಿವಾದದಲ್ಲಿ ಶಾಸಕ ಅರವಿಂದ ಲಿಂಬಾವಳಿ ಅವರು ಮಧ್ಯಸ್ಥಿಕೆ ವಹಿಸಿದ್ದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ' ಎಂದು ಬರೆದುಕೊಂಡಿದ್ದಾರೆ. 

ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಪ್ರದೀಪ್ ನಿವಾಸಕ್ಕೆ ಕಾಂಗ್ರೆಸ್ ನಾಯಕರ ಭೇಟಿ

Similar News