×
Ad

ಜ.5ರಂದು ರಾಜ್ಯಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ: ಬೆಂಗಳೂರು-ಮೈಸೂರು ಹೆದ್ದಾರಿ ಪರಿಶೀಲನೆ

Update: 2023-01-03 17:57 IST

ಬೆಂಗಳೂರು, ಜ.3: ಕೇಂದ್ರ ಸಾರಿಗೆ ಸಚಿವ ನಿತೀನ್ ಗಡ್ಕರಿ ಜ.5ರಂದು ಬೆಂಗಳೂರು-ಮೈಸೂರು ಹೆದ್ದಾರಿಯ ಪರಿಶೀಲನೆ ನಡೆಸಲಿದ್ದಾರೆ. ಆನಂತರ, ಸಂಜೆ ಮುಖ್ಯಮಂತ್ರಿ ಜೊತೆ  ಅವರು ಸಭೆ ನಡೆಸಿ ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಉದ್ಘಾಟನೆಗೆ ಸಿದ್ಧವಾಗಿರುವ ಈ ಹೆದ್ದಾರಿಯ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಅನೇಕ ಜನಪ್ರತಿನಿಧಿಗಳು ನಿತೀನ್ ಗಡ್ಕರಿಗೆ ದೂರು ಸಲ್ಲಿಸಿ, ಹೆದ್ದಾರಿಯ ನಿರ್ಮಾಣ ಕಾರ್ಯದ ವೈಜ್ಞಾನಿಕ ಪರಿಶೀಲನೆ ನಡೆಸುವಂತೆ ಮನವಿ ಮಾಡಿದ್ದರು.

ಹೆದ್ದಾರಿಯ ಪರಿಶೀಲನೆ ವೇಳೆ ನಿತೀನ್ ಗಡ್ಕರಿ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ಮೈಸೂರು ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇನ್ನಿತರರು ಉಪಸ್ಥಿತರಿರಲಿದ್ದಾರೆ ಎಂದು ತಿಳಿದು ಬಂದಿದೆ.

Similar News