ಟವರ್‌ನಲ್ಲಿ ಸಿಲುಕಿದ್ದ ಪಕ್ಷಿಯನ್ನು ರಕ್ಷಿಸಿದ ಟ್ರಾಫಿಕ್ ಪೊಲೀಸ್; ಗೃಹ ಸಚಿವ ಆರಗ ಜ್ಞಾನೆಂದ್ರ ಶ್ಲಾಘನೆ

ವಿಡಿಯೋ ವೈರಲ್

Update: 2023-01-03 14:55 GMT

ಬೆಂಗಳೂರು, ಜ.3: ನಗರದ ಟ್ರಾಫಿಕ್ ಪೊಲೀಸ್ ಒಬ್ಬರು ವಿದ್ಯುತ್ ಟವರ್‌ನಲ್ಲಿ ಸಿಲುಕಿಕೊಂಡಿದ್ದ ಪಕ್ಷಿಯನ್ನು ರಕ್ಷಿಸಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣಳಲ್ಲಿ ವೈರಲ್ ಆಗಿದೆ. ಅಲ್ಲದೇ ಅವರ ಕಾರ್ಯಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಟವರ್‌ನಲ್ಲಿ ಸಿಲುಕಿಕೊಂಡಿದ್ದ ಕಾಗೆಯನ್ನು ರಕ್ಷಿಸಲು ಟವರ್ ಏರಿರುವ ರಾಜಾಜಿನಗರದ  ಪೊಲೀಸ್ ಪೇದೆ ಸುರೇಶ್‌ , ಕಾಗೆಯ ಪ್ರಾಣವನ್ನು ಉಳಿಸಿ ಮಾನವೀಯತೆ ಮೆರೆದಿದ್ದಾರೆ.  ಈ ವಿಡಿಯೋವನ್ನು ಸಚಿವ ಆರಗ ಜ್ಞಾನೇಂದ್ರ, ಬೆಂಗಳೂರಿನ ಪಶ್ಚಿಮ ಟ್ರಾಫಿಕ್‌ ವಿಭಾಗದ ಉಪ ಪೊಲೀಸ್‌ ಆಯುಕ್ತ ಕುಲದೀಪ್ ಕುಮಾರ್ ಆರ್ ಜೈನ್ ಸೇರಿದಂತೆ ಹಲವರು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ. 

''ನಮ್ಮ ಸಂಚಾರಿ ಪೊಲೀಸರು ರಕ್ಷಣಾ ಕಾರ್ಯದಲ್ಲೂ ಸೈ ಎನಿಸಿಕೊಂಡಿದ್ದಾರೆ. ರಾಜಾಜಿನಗರದ ಟ್ರಾಫಿಕ್‌ ಪೊಲೀಸ್‌ ಸುರೇಶ್‌ ಅವರು, ಟವರ್‌ನಲ್ಲಿ ಸಿಲುಕಿದ್ದ ಕಾಗೆಯನ್ನು ಅತ್ಯಂತ ಕಾಳಜಿಯಿಂದ ರಕ್ಷಣೆ ಮಾಡಿದ್ದಾರೆ. ಅವರ ಸಮಯ ಪ್ರಜ್ಞೆ ಹಾಗೂ ಕರ್ತವ್ಯ ಪ್ರಜ್ಞೆಗೆ ಅಭಿನಂದನೆಗಳು'' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಟ್ವೀಟ್ ಮಾಡಿದ್ದಾರೆ. 

Similar News