×
Ad

ಛತ್ತೀಸ್‍ಗಡದ ನಾರಾಯಣಪುರದಲ್ಲಿ ಕ್ಯಾಥೋಲಿಕ್ ಚರ್ಚ್ ಧ್ವಂಸ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಡಾ.ಪೀಟರ್ ಮಚಾದೊ ಆಗ್ರಹ

Update: 2023-01-03 21:52 IST

ಬೆಂಗಳೂರು, ಜ.3: ಛತ್ತೀಸ್‍ಗಡ ರಾಜ್ಯದ ನಾರಾಯಣಪುರ ಜಿಲ್ಲೆಯಲ್ಲಿ ಧಾರ್ಮಿಕ ಮತಾಂತರ ಮತ್ತು ಘರ್ಷಣೆಗಳ ವಿರುದ್ಧ ನಡೆದ ಪ್ರತಿಭಟನಾ ಮೆರವಣಿಗೆ ವೇಳೆ ಪ್ರತಿಭಟನಾಕಾರರ ಗುಂಪೊಂದು ಕ್ಯಾಥೋಲಿಕ್ ಚರ್ಚ್ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿರುವ ಘಟನೆ ಮನಸ್ಸಿಗೆ ನೋವುಂಟು ಮಾಡಿದೆ ಎಂದು ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ಸಂಘಟನೆಯ ಅಧ್ಯಕ್ಷ ಹಾಗೂ ಬೆಂಗಳೂರಿನ ಆರ್ಚ್ ಬಿಷಪ್ ಡಾ.ಪೀಟರ್ ಮಚಾದೊ ತಿಳಿಸಿದ್ದಾರೆ.

ಚರ್ಚ್‍ನಲ್ಲಿ ಲೋಕಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಲು ಜಮಾಯಿಸಿದ ಭಕ್ತರ ಮೇಲೆ ದಾಳಿ ನಡೆಸಲಾಗಿದ್ದು, ಕ್ರೈಸ್ತರ ಅತ್ಯಂತ ಪವಿತ್ರವಾದ ಆರಾಧನಾ ಸ್ಥಳವನ್ನು ನೆಲಸಮ ಮಾಡಿರುವುದು ಖಂಡನೀಯ. ಈ ದುರಂತ ಕ್ಷಣದಲ್ಲಿ ನಾವು ಛತ್ತೀಸ್‍ಗಢದ ನಾರಾಯಣಪುರದ ಕ್ರಿಶ್ಚಿಯನ್ನರೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ ಎಂದು ಅವರು ಹೇಳಿದ್ದಾರೆ.

ಅಲ್ಲಿನ ಸ್ಥಳೀಯ ಸರಕಾರ ಪ್ರತಿಭಟನಾಕಾರರಿಗೆ ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಮತ್ತು ಕೋಮುಗಲಭೆಗಳನ್ನು ಸೃಷ್ಟಿಸಲು ಅಂಚಿನಲ್ಲಿರುವ ಅಂಶಗಳಿಗೆ ಅವಕಾಶ ಮಾಡಿಕೊಡುತ್ತಾರೆ ಎಂಬುದು ದಾಳಿ ಮೂಲಕ ಸ್ಪಷ್ಟವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಅಲ್ಪಸಂಖ್ಯಾತರ ಮನಸ್ಸಿನಲ್ಲಿ ಶಿಸ್ತು ಮತ್ತು ಆತ್ಮವಿಶ್ವಾಸವನ್ನು ತುಂಬುವುದು ರಾಜ್ಯದ ಅಧಿಕಾರಿಗಳ ಕರ್ತವ್ಯ. ಕೂಡಲೇ ತಪ್ಪಿತಸ್ಥರನ್ನು ಕಾನೂನು ಕ್ರಮಕ್ಕೆ ಒಳಪಡಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Similar News