ಸಂತೆಕಟ್ಟೆ ಓವರ್‌ಪಾಸ್: ಶಾಸಕರಿಂದ ಕಾಮಗಾರಿ ಪರಿಶೀಲನೆ

Update: 2023-01-03 17:02 GMT

ಉಡುಪಿ: ಕಲ್ಯಾಣಪುರ ಸಂತೆಕಟ್ಟೆ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಸಮಸ್ಯೆ ತಪ್ಪಿಸಲು ಓವರ್ ಪಾಸ್ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದು, ಕಾಮಗಾರಿ ಆರಂಭಿಸುವ ಬಗ್ಗೆ ಜ.3 ರಂದು ಶಾಸಕ ಕೆ. ರಘುಪತಿ ಭಟ್ ಅವರು ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ನಗರ ಸಭೆಯ ಸದಸ್ಯ ಗಿರೀಶ್ ಅಂಚನ್, ನಾಮ ನಿರ್ದೇಶಿತ ಸದಸ್ಯ ದಿನೇಶ್ ಪೈ, ಕಲ್ಯಾಣಪುರ ಗ್ರಾಪಂ ಅಧ್ಯಕ್ಷ ಕೃಷ್ಣ ದೇವಾಡಿಗ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ, ನಗರ ಸಭೆಯ ಪೌರಾಯುಕ್ತ ಉದಯ್ ಶೆಟ್ಟಿ, ಉಡುಪಿ ತಹಶೀಲ್ದಾರ್ ಮಹೇಶ್ ಹಾಗೂ ರಾಷ್ಟ್ರೀಯ ಹೆದ್ದಾರಿ ಅಭಿಯಂತರು ಮತ್ತು ಗುತ್ತಿಗೆದಾರರು ಉಪಸ್ಥಿತರಿದ್ದರು.

ಅಧಿಕಾರಿಗಳೊಂದಿಗೆ ಸಭೆ: ಇದಕ್ಕೆ ಮುನ್ನ ಶಾಸಕ ಕೆ. ರಘುಪತಿ ಭಟ್ ಅವರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂತೆಕಟ್ಟೆ ಓವರ್‌ಪಾಸ್‌ಗೆ ಸಂಬಂಧಿಸಿದಂತೆ ಇಲಾಖಾಧಿಕಾರಿಗಳ ಸಭೆ ನಡೆಸಿದರು.

ಈ ರಸ್ತೆಯಲ್ಲಿ ವಾಹನ ದಟ್ಟಣೆ ಅಧಿಕವಾಗಿರುವುದರಿಂದ  ಕಾಮಗಾರಿ ಆರಂಭಗೊಂಡ ನಂತರ ಸಮರ್ಪಕವಾಗಿ ಟ್ರಾಫಿಕ್ ನಿರ್ವಹಣೆ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಪೋಲಿಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ, ನಗರಸಭೆಯ ಪೌರಾಯುಕ್ತ ಉದಯ್ ಶೆಟ್ಟಿ, ಉಡುಪಿ ತಹಶೀಲ್ದಾರ್ ಮಹೇಶ್ ಮೊದಲಾದವರಿದ್ದರು.

Similar News