ಉಡುಪಿ: ನವೀಕೃತ ಶಿಶು ಪಾಲನಾ ಕೇಂದ್ರ ಉದ್ಘಾಟನೆ
Update: 2023-01-04 19:11 IST
ಉಡುಪಿ: ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ನವೀಕೃತ ಶಿಶು ಪಾಲನಾ ಕೇಂದ್ರವನ್ನು ಒಕ್ಕೂಟ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಸೋಮವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ತರಬೇತಿ ನಿರತ ಐಎಎಸ್ ಅಧಿಕಾರಿ ಯತೀಶ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶಿವಕುಮಾರಯ್ಯ ಎಸ್, ಜಿಲ್ಲಾ ಮಹಿಳಾ ಮಂಡಲ ಒಕ್ಕೂಟದ ಅಧ್ಯಕ್ಷೆ ಸರಳಾ ಕಾಂಚನ್ ಮತ್ತಿತರರು ಉಪಸ್ಥಿತರಿದ್ದರು.