ಮೈಸೂರು: ಇಲವಾಲ ಬಳಿ ಬೋನಿಗೆ ಬಿದ್ದ ಚಿರತೆ

Update: 2023-01-04 14:29 GMT

ಮೈಸೂರು,ಜ.4: ನಗರದ ಇಲವಾಲ ಬಳಿ ಇರುವ ಆರ್ ಎಂಪಿ ಘಟಕದ ಬಳಿ ಮಂಗಳವಾರ ರಾತ್ರಿ  ಚಿರತೆಯೊಂದು ಬೋನಿಗೆ ಬಿದ್ದಿದೆ.

ಇಲವಾಲ ಭಾಗದಲ್ಲಿ ಆಗಾಗ ಚಿರತೆ ಕಾಣಿಸಿಕೊಳ್ಳುತ್ತಿದ್ದ ಬಗ್ಗೆ ದೂರುಗಳು ಬಂದಿದ್ದವು. ಈ ಹಿನ್ನಲೆಯಲ್ಲಿ ಆರ್ ಎಂಪಿ ಘಟಕ ಸೇರಿದಂತೆ ನಾನಾ ಭಾಗಗಳಲ್ಲಿ ಬೋನು ಇರಿಸಲಾಗಿತ್ತು. ಮಂಗಳವಾರ ರಾತ್ರಿ ಚಿರತೆ ಬೋನಿಗೆ ಬಿದ್ದಿದೆ.

ಐದರಿಂದ ಆರು ವರ್ಷದ ಗಂಡು ಚಿರತೆ ಎಂದು ಅಂದಾಜಿಸಲಾಗಿದ್ದು ಚಿರತೆಯನ್ನು ವೈದ್ಯಕೀಯ ಪರೀಕ್ಷೆಗೆ ಗುರಿಪಡಿಸಿದ ನಂತರ ಕಾಡಿಗೆ ಬಿಡಲಾಗುವುದು ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಲಕ್ಷ್ಮಿಕಾಂತ್ ತಿಳಿಸಿದ್ದಾರೆ.

Similar News