ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ

Update: 2023-01-04 14:50 GMT

ಬೆಂಗಳೂರು, ಜ.4: ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಬುಧವಾರ ಆದೇಶ ಹೊರಡಿಸಿದೆ.

ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ.ಮಣಿವಣ್ಣನ್ ಅವರಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಬಿಬಿಎಂಪಿ ವಿಶೇಷ ಆಯುಕ್ತ ಡಾ. ರಾಮ್ ಪ್ರಸಾದ್ ಮನೋಹರ್ ಅವರಿಗೆ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ್ ಅವರಿಗೆ ಕೆಆರ್‍ಐಡಿಎಲ್‍ನ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಆದೇಶಿಸಲಾಗಿದೆ.

Similar News