ಉಡುಪಿ: ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ: ಅರ್ಜಿ ಆಹ್ವಾನ

Update: 2023-01-04 14:50 GMT

ಉಡುಪಿ: ಸಮಾಜಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ವತಿಯಿಂದ 2023-24ನೇ ಸಾಲಿಗೆ ಜಿಲ್ಲೆಯಲ್ಲಿ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಡಾ.ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾಗಾಂಧಿ ಮತ್ತು ನಾರಾಯಣ ಗುರು ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಪ್ರಸ್ತುತ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ವಸತಿ ಶಾಲೆಗಳನ್ನು ಅಥವಾ ಪ್ರಾಂಶುಪಾಲರುಗಳನ್ನು ಸಂಪರ್ಕಿಸಬಹುದು. 

ಆಸಕ್ತರು ಆರೂರು ಮೊರಾರ್ಜಿ ದೇಸಾಯಿ ವಸತಿ ಶಾಲೆ ಮೊ.ನಂ: 7022713447, ಕಳತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆ ಮೊ.ನಂ: 9535225409, ಶಂಕರನಾರಾಯಣ ಡಾ.ಬಿ.ಆರ್‌ಅಂಬೇಡ್ಕರ್ ವಸತಿ ಶಾಲೆ ಮೊ.ನಂ: 7406882275, ಸಿದ್ಧಾಪುರ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ ಮೊನಂ: 9482487266, ಪಟ್ಲ ಹೀರೆಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಶಾಲೆ ಮೊ.ನಂ: 9480586729, ಮಿಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆ ಮೊ.ನಂ: 9686898326, ಹೆರಂಜಾಲು ಮೊರಾರ್ಜಿ ದೇಸಾಯಿ ವಸತಿ ಶಾಲೆ ಮೊ.ನಂ: 9480461537, ಯಡಾಡಿ -ಮತ್ಯಾಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ನಾರಾಯಣಗುರು ವಸತಿ ಶಾಲೆ (ಬೇಳೂರು) ಮೊ.ನಂ: 9901519126ಅನ್ನು ಸಂಪರ್ಕಿಸ ಬಹುದು. 

ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಮಾರ್ಚ್ 12ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ಸಮಾಜಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Similar News