ಪಾವಗಡ: ಪೊನ್ನಸಮುದ್ರ ಗ್ರಾ.ಪಂ. ಅಧ್ಯಕ್ಷರಾಗಿ ತಾಳೇಮರದಹಳ್ಳಿ ಸುಮಿತ್ರಾ ವಿನೋದ್ ಕುಮಾರ್ ಅವಿರೋಧ ಆಯ್ಕೆ
ಪಾವಗಡ: ಪಾವಗಡ ತಾಲ್ಲೂಕಿನ ಪೊನ್ನಸಮುದ್ರ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ತಾಳೇಮರದಹಳ್ಳಿ ಸುಮಿತ್ರಾ ವಿನೋದ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಿಂದಿನ ಅಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸುಮಿತ್ರಾ ವಿನೋದ್ ಕುಮಾರ ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಅವಿರೋಧವಾಗಿ ಆಯ್ಕೆಗೊಂಡರು.
ನಂತರ ನೂತನ ಅಧ್ಯಕ್ಷೆ ಸುಮಿತ್ರಾ ಮಾತನಾಡಿ, ‘ಸರ್ಕಾರದ ಸವಲತ್ತುಗಳನ್ನು ಗ್ರಾ.ಪಂ. ಮೂಲಕ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡುತ್ತೇನೆ. ಅಭಿವೃದ್ಧಿಗೆ ಎಲ್ಲಾ ಸದಸ್ಯರ ಜೊತೆಗೂಡಿ ಶ್ರಮಿಸುತ್ತೇನೆ’ ಎಂದರು.
ಗ್ರಾಮಗಳ ಅಭಿವೃದ್ಧಿಗೂ ಒತ್ತು ನೀಡಲಾಗುವುದು ಎಂದು ಅವರು ಭರವಸೆ ನೀಡಿದರು.
ಈ ವೇಳೆ ತಾಳೆ ಮರದಹಳ್ಳಿ ಹಿರಿಯ ಕಾಂಗ್ರೆಸ್ ಮುಖಂಡ ನರಸಿಂಹಯ್ಯ, ಗ್ರಾಪಂ ಉಪಾಧ್ಯಕ್ಷ ರಾಮರೆಡ್ಡಿ,ಪಿ ಎಚ್ ಮಹೇಶ್,ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಿವಾನಂದ ಸತೀಯಲ್,ಗ್ರಾ.ಪಂ. ಸದಸ್ಯರು, ಸ್ಥಳೀಯ ಮುಖಂಡರು ಹಾಜರಿದ್ದರು.
ಪಾವಗಡ ತಾಲ್ಲೂಕಿನ ಪೊನ್ನಸಮುದ್ರ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ತಾಳೇಮರದಹಳ್ಳಿ ಸುಮಿತ್ರಾ ವಿನೋದ್ ಕುಮಾರ್ ಅವರನ್ನು ಸ್ಥಳೀಯ ಮುಖಂಡರು ಅಭಿನಂದಿಸಿದರು.