ಕಟೀಲ್ 'ಲವ್ ಜಿಹಾದ್' ಹೇಳಿಕೆ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇನೆ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್
Update: 2023-01-04 23:01 IST
ಬೆಂಗಳೂರು, ಜ. 4: ರಸ್ತೆ, ಚರಂಡಿ, ಮೋರಿ ಎಂಬ ಸಣ್ಣ ವಿಷಯಗಳನ್ನು ಬಿಟ್ಟು ಲವ್ ಜಿಹಾದ್ ಬಗ್ಗೆ ಗಮನ ಹರಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೀಡಿರುವ ಹೇಳಿಕೆ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದಲ್ಲಿ ಚುನಾವಣಾ ಅಜೆಂಡಾ ಸಿದ್ಧವಾಗಿದೆ. ನಳೀನ್ ಕುಮಾರ್ ಕಟೀಲ್ ನೀಡಿರುವ ಹೇಳಿಕೆ ಬಗ್ಗೆ ನಾನು ಮಾಹಿತಿ ಪಡೆದುಕೊಳ್ಳುತ್ತೇನೆ ಎಂದರು.
ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಯ ವಿವೇಚನೆಗೆ ಬಿಟ್ಟಿದ್ದು, ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಷ್ಟೊತ್ತಿಗಾಗಲೆ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಆಗಿಲ್ಲ. ಆದಷ್ಟು ಬೇಗ ಸಂಪುಟ ವಿಸ್ತರಣೆ ಆಗೋದು ಖಚಿತ ಎಂದು ಅರುಣ್ ಸಿಂಗ್ ಹೇಳಿದರು.