ಬೆಂಗಳೂರು | ಬಿಟೆಕ್ ವಿದ್ಯಾರ್ಥಿನಿ ಕೊಲೆ ಪ್ರಕರಣ: ಆಡಳಿತ ಮಂಡಳಿ ವಿರುದ್ಧವೂ ಎಫ್‍ಐಆರ್
ಬೆಂಗಳೂರು, ಜ. 4: ಬಿ.ಟೆಕ್ ವಿದ್ಯಾರ್ಥಿನಿ ಕೊಲೆ ಪ್ರಕರಣ ಸಂಬಂಧ ಇಲ್ಲಿನ ಖಾಸಗಿ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ರಾನಾನುಕುಂಟೆ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದ್ದು, ಖಾಸಗಿ ಕಾಲೇಜಿನ ಆಡಳಿತ ಮಂಡಳಿ ಸಿಬ್ಬಂದಿ, ಬೇರೆ ಕಾಲೇಜಿನ ವಿದ್ಯಾರ್ಥಿಯನ್ನು ಕಾಲೇಜು ಆವರಣಕ್ಕೆ ಬಿಟ್ಟಿದ್ದಾರೆ. ಪ್ರಕರಣದಲ್ಲಿ ವಿಶ್ವವಿದ್ಯಾಲಯದವರ ನಿರ್ಲಕ್ಷ್ಯವೂ ಇದೆ. ಹೀಗಾಗಿ, ಆಡಳಿತ ಮಂಡಳಿಯನ್ನು ಆರೋಪಿಯನ್ನಾಗಿಸಲಾಗಿದೆ ಎಂದು ತಿಳಿದುಬಂದಿದೆ.
ಜ.2ರಂದು ರಾನಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಕಾಲೇಜಿನಲ್ಲಿ 19 ವರ್ಷದ ವಿದ್ಯಾರ್ಥಿನಿಯನ್ನು 23 ವರ್ಷದ ಕಲ್ಯಾಣ್ ಎಂಬಾತ ಚಾಕುವಿನಿಂದ ಇರಿದು ಹತ್ಯೆಗೈದಿದ್ದ. ಬಳಿಕ, ನೃಪತುಂಗ ಕಾಲೇಜಿನ ಪವನ್ ಕಲ್ಯಾಣ್ ಕೂಡ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಈ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಚಾಕುವಿನಿಂದ ಇರಿದು ವಿದ್ಯಾರ್ಥಿನಿಯ ಕೊಲೆಗೈದು ಆತ್ಮಹತ್ಯೆಗೆ ಯತ್ನಿಸಿದ ಯುವಕ