ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ: ಸಿಎಂ ಬೊಮ್ಮಾಯಿ ಘೋಷಣೆ

ಬೆಳಗಾವಿ | ರಸ್ತೆ ಅಪಘಾತದಿಂದ 6 ಮಂದಿ ಸಾವು ಪ್ರಕರಣ

Update: 2023-01-05 05:12 GMT

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದಿಂದ ಜಿಲ್ಲೆಯ ಸವದತ್ತಿ ಯಲ್ಲಮ್ಮ ಜಾತ್ರೆಗೆ ತೆರಳುತ್ತಿದ್ದ ವಾಹನ ಅಪಘಾತದಿಂದ 6 ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರ ಕುಟುಂಬಗಳಿಗೆ ತಲಾ ಐದು ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸವದತ್ತಿ ಯಲ್ಲಮ್ಮ ಜಾತ್ರೆಗೆ ತೆರಳುತ್ತಿದ್ದ ವಾಹನ ಅಪಘಾತಕ್ಕೀಡಾಗಿ 6 ಜನ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಮೃತರ ಆತ್ಮಕ್ಕೆ ಸದ್ಗತಿ ಸಿಗಲಿ, ಕುಟುಂಬಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ ಎಂದರು.

ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿ ನೀಡಲಾಗುವದು‌ ಹಾಗೂ ಗಾಯಗೊಂಡವರ ಚಿಕಿತ್ಸೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Similar News