ವಿಧಾನಸೌಧದಲ್ಲಿ ಅನಧಿಕೃತವಾಗಿ 10 ಲಕ್ಷ ರೂ. ಹಣ ಸಾಗಿಸುತ್ತಿದ್ದ ಆರೋಪ: ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ವಶಕ್ಕೆ

Update: 2023-01-05 14:30 GMT

ಬೆಂಗಳೂರು, ಜ.5: ಇಲ್ಲಿನ ವಿಧಾನಸೌಧದ ವ್ಯಾಪ್ತಿಯಲ್ಲಿ ಸಹಾಯಕ ಇಂಜಿನಿಯರೊಬ್ಬರ ಬಳಿ ದಾಖಲೆ ಇಲ್ಲದ 10.5 ಲಕ್ಷ ರೂಪಾಯಿ ನಗದು ಜಪ್ತಿ ಮಾಡಲಾಗಿದೆ.

ವಿಧಾನಸೌಧದ ಪಶ್ಚಿಮ ದ್ವಾರದ ಮೂಲಕ ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಜಗದೀಶ್ ದಾಖಲೆ ಇಲ್ಲದ ನಗದು ಸಾಗಾಟ ಮಾಡುತ್ತಿದ್ದಾಗ, ಮುಖ್ಯ ದ್ವಾರದಲ್ಲಿ ಪೊಲೀಸರು ಪರಿಶೀಲನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.

ಮಂಡ್ಯ ಮೂಲದ ಜಗದೀಶ್ ಬ್ಯಾಗ್‍ನಲ್ಲಿ ದೊಡ್ಡ ಮೊತ್ತದ ಹಣ ಇರುವುದು ಪತ್ತೆಯಾಗಿದೆ. ಆದರೆ, ಹಣದ ಮೂಲದ ಕುರಿತಾಗಿ ಪೊಲೀಸರು ಪ್ರಶ್ನಿಸಿದಾಗ ಯಾವುದೇ ಸ್ಪಷ್ಟವಾದ ಮಾಹಿತಿಯನ್ನು ನೀಡಿಲ್ಲ. ಈ ಹಿನ್ನೆಲೆಯಲ್ಲಿ ಜಗದೀಶ್ ಹಾಗೂ ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ.

Similar News