ಸ್ಯಾಂಟ್ರೋ ರವಿ ವಿರುದ್ಧ ಯಾವುದೇ ದೂರುಗಳಿದ್ದರೆ ತನಿಖೆ: ಆರಗ ಜ್ಞಾನೇಂದ್ರ
Update: 2023-01-05 12:03 IST
ಬೆಂಗಳೂರು: ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದ ಎನ್ನಲಾದ ಸ್ಯಾಂಟ್ರೋ ರವಿ ಬಗ್ಗೆ ಯಾವುದಾದರೂ ದೂರುಗಳಿದ್ದರೆ, ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಯಾಂಟ್ರೋ ರವಿ ಬಗ್ಗೆ ಎಚ್. ಡಿ. ಕುಮಾರಸ್ವಾಮಿಯವರಿಗೆ ಹೆಚ್ಚಿನ ಮಾಹಿತಿ ಇರಬೇಕು, ಏನೇ ಇದ್ದರೂ, ಕಾನೂನು ಕ್ರಮವಹಿಸಲಾಗುವುದು ಎಂದರು.
ಆತ ಯಾವುದಾದರೂ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರೆ ಪೊಲೀಸರು ಸೂಕ್ತ ಕ್ರಮ ತೆಗೆದು ಕೊಳ್ಳುತ್ತಾರೆ. ಪ್ರತಿನಿತ್ಯ ನನ್ನನ್ನು ನೂರಾರು ಜನರು ಅಹವಾಲು ಸಲ್ಲಿಸಲು ಭೇಟಿಯಾಗುತ್ತಾರೆ. ಕಾಣಲು ಬರುವ ಎಲ್ಲರ ಹಿನ್ನೆಲೆ ಚರಿತ್ರೆ ಬಗ್ಗೆ ಮಾಹಿತಿ ಇರುವುದಿಲ್ಲ ಎಂದು ಅವರು ಹೇಳಿದರು.