×
Ad

ಬೆಂಗಳೂರು- ಚೆನ್ನೈ ಎಕ್ಸ್​ಪ್ರೆಸ್​ವೇ ಕಾಮಗಾರಿ ಪರಿಶೀಲಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

Update: 2023-01-05 12:54 IST

ಬೆಂಗಳೂರು, ಜ.5: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಗುರುವಾರ ರಾಜ್ಯಕ್ಕೆ ಭೇಟಿ ನೀಡಿದ್ದು, ಬೆಂಗಳೂರು- ಚೆನ್ನೈ ಎಕ್ಸ್​ಪ್ರೆಸ್​ವೇ ಕಾಮಗಾರಿ ಪ್ರಗತಿಯನ್ನು ಪರಿಶೀಲಿಸಿದರು. 

262 ಕಿಲೋ ಮೀಟರ್ ಉದ್ದದ ಅಷ್ಟಪಥ ಹೆದ್ದಾರಿ ಕಾಮಗಾರಿಯನ್ನು 16, 730 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ನಿತಿನ್ ಗಡ್ಕರಿ ಇಂದು ವೈಮಾನಿಕ ಸಮೀಕ್ಷೆ ಮೂಲಕ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ  ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲ್ ಹಾಗೂ ಸಂಸದ ಮುನಿಸ್ವಾಮಿ ಉಪಸ್ಥಿತರಿದರು.

ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ವೇ ಕಾಮಗಾರಿ ಅವೈಜ್ಞಾನಿಕ: ಸಂಸದೆ ದೂರು

ಉದ್ಘಾಟನೆಗೆ ಸಿದ್ಧಗೊಂಡಿರುವ ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ವೇ ಹೆದ್ದಾರಿಯ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಅನೇಕ ಜನಪ್ರತಿನಿಧಿಗಳು ನಿತೀನ್ ಗಡ್ಕರಿಗೆ ದೂರು ಸಲ್ಲಿಸಿ, ಹೆದ್ದಾರಿಯ ನಿರ್ಮಾಣ ಕಾರ್ಯದ ವೈಜ್ಞಾನಿಕ ಪರಿಶೀಲನೆ ನಡೆಸುವಂತೆ ಮನವಿ ಮಾಡಿದ್ದರು.

Similar News