×
Ad

PSI ಹಗರಣ: ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಸೇರಿ 26 ಆರೋಪಿಗಳಿಗೆ ಜಾಮೀನು

Update: 2023-01-05 13:58 IST

ಕಲಬುರಗಿ, ಜ.5: ಪಿಎಸ್ ಐ ನೇಮಕಾತಿ ಹಗರಣದಲ್ಲಿ ಬಂಧನಕ್ಕೊಳಗಾಗಿದ್ದ 26 ಮಂದಿ ಆರೋಪಿಗಳಿಗೆ ಗುರುವಾರ ಜಿಲ್ಲಾ ನ್ಯಾಯಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ, ಮಂಜುನಾಥ್ ಮೇಳಕುಂದಿ, ಕಾಶಿನಾಥ್ ಚಿಲ್, ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಸೇರಿ 26 ಮಂದಿಗೆ ಕಲಬುರಗಿ ಜಿಲ್ಲಾ ನ್ಯಾಯಲಯವು ಜಾಮೀನು ಮಂಜೂರು ಮಾಡಿದೆ. 

ಪಿಎಸ್​ಐ ನೇಮಕಾತಿ ಹಗರಣದಲ್ಲಿ ಈವರೆಗೆ 36 ಜನರಿಗೆ ಜಾಮೀನು ಮಂಜೂರಾಗಿದ್ದು, ಇತ್ತೀಚೆಗೆ  ದಿವ್ಯಾ ಹಾಗರಗಿ ಪತಿ ರಾಜೇಶ್ ಹಾಗರಗಿಗೆ ಕಲಬುರಗಿ ಹೈಕೋರ್ಟ್ ಜಾಮೀನು ನೀಡಿತ್ತು.

ಇದನ್ನೂ ಓದಿ: PSI ಹಗರಣ: ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಪತಿ ರಾಜೇಶ್ ಗೆ ಹೈಕೋರ್ಟ್ ನಿಂದ ಜಾಮೀನು

Similar News