×
Ad

ಭೋಪಾಲ್ : ಸ್ವತಃ ಅರಿವಳಿಕೆ ಚುಚ್ಚುಮದ್ದು ಪಡೆದು ಮಹಿಳಾ ವೈದ್ಯೆ ಆತ್ಮಹತ್ಯೆ

Update: 2023-01-05 14:57 IST

ಭೋಪಾಲ್: ಭೋಪಾಲ್‌ನ ಸರಕಾರಿ ಸ್ವಾಮ್ಯದ ಗಾಂಧಿ ವೈದ್ಯಕೀಯ ಕಾಲೇಜಿನ (ಜಿಎಂಸಿ) ಹಾಸ್ಟೆಲ್‌ನಲ್ಲಿ 24 ವರ್ಷದ ಮಹಿಳಾ ವೈದ್ಯೆಯೊಬ್ಬರು ಅರಿವಳಿಕೆ ಔಷಧವನ್ನು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಇಂದು ತಿಳಿಸಿದ್ದಾರೆ.

ಮೃತ ಮಹಿಳೆಯನ್ನು ಆಕಾಂಶಾ ಮಹೇಶ್ವರಿ ಎಂದು ಗುರುತಿಸಲಾಗಿದ್ದು, ಬುಧವಾರ ಸಂಜೆ ಅವರ ಹಾಸ್ಟೆಲ್ ಕೋಣೆಯಲ್ಲಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪೊಲೀಸರು ಮಹಿಳೆಯ ಕೊಠಡಿಯಿಂದ ಖಾಲಿ ಇಂಜೆಕ್ಷನ್ ಬಾಟಲುಗಳು ಮತ್ತು ಸಿರಿಂಜ್ ಅನ್ನು ವಶಪಡಿಸಿಕೊಂಡಿದ್ದಾರೆ ಎಂದು ಕೋಹ್-ಇ-ಫಿಝಾ ಪೊಲೀಸ್ ಠಾಣೆಯ ಉಸ್ತುವಾರಿ ವಿಜಯ್ ಸಿಸೋಡಿಯಾ ಹೇಳಿದ್ದಾರೆ.  ಮಹಿಳೆಯು ತಲಾ 2.5 ಮಿಲಿಯ ನಾಲ್ಕು ಡೋಸ್ ಅರಿವಳಿಕೆಯನ್ನು ಪಡೆದಿದ್ದಾಳೆ ಎಂದು ತಿಳಿದುಬಂದಿದೆ.

Similar News