ಬೆಂಗಳೂರು - ಮೈಸೂರು ಹೆದ್ದಾರಿಯಲ್ಲೇ ಲ್ಯಾಂಡ್ ಆದ ನಿತಿನ್ ಗಡ್ಕರಿ ಹೆಲಿಕಾಪ್ಟರ್
ಬೆಂಗಳೂರು, ಜ.5: ಗುರುವಾರ ಬೆಂಗಳೂರು- ಚೆನ್ನೈ ಎಕ್ಸ್ಪ್ರೆಸ್ವೇ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ವೈಮಾನಿಕ ಸಮೀಕ್ಷೆ ನಡೆಸಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರ ಹೆಲಿಕಾಪ್ಟರ್ ನೂತನವಾಗಿ ನಿರ್ಮಿಸಲಾಗಿರುವ ಬೆಂಗಳೂರು- ಮೈಸೂರು ಹೆದ್ದಾರಿಯ ಮಧ್ಯೆ ರಾಮನಗರದ ಬಳಿ ನಿರ್ಮಿಸಲಾದ ವಿಶೇಷ ಹೆಲಿಪಾಡ್‌ನಲ್ಲಿ ಲ್ಯಾಂಡ್ ಆಗಿದೆ.
ಈ ಸಂದರ್ಭದಲ್ಲಿ ನಿತಿನ್ ಗಡ್ಕರಿ ಅವರ ಜೊತೆ ಲೋಕೋಪಯೋಗಿ ಸಚಿವ ಸಿ. ಸಿ ಪಾಟೀಲ್, ಸಂಸದ ಪ್ರತಾಪ್ ಸಿಂಹ ಕೂಡ ಹೆಲಿಕ್ಯಾಪ್ಟರ್ ನಲ್ಲಿದ್ದರು.
ಇನ್ನು ಬೆಂಗಳೂರು- ಚೆನ್ನೈ ಎಕ್ಸ್ಪ್ರೆಸ್ವೇ ಕಾಮಗಾರಿ ಬಗ್ಗೆ ಟ್ವೀಟ್ ಮಾಡಿರುವ ನಿತಿನ್ ಗಡ್ಕರಿ, ನಾವು 16,730 ಕೋಟಿ ರೂ. ಮೌಲ್ಯದ ಈ 262 ಕಿಮೀ ಉದ್ದದ 8 ಲೇನ್ ಹೆದ್ದಾರಿಯನ್ನು ನಿರ್ಮಿಸುತ್ತಿದ್ದೇವೆ. ಇದನ್ನು ಗಂಟೆಗೆ 120 ಕಿಮೀ ವೇಗದಲ್ಲಿ ವಿನ್ಯಾಸಗೊಳಿಸಲಾಗಿದೆ. ಇದರಿಂದ ಬೆಂಗಳೂರು ಮತ್ತು ಚೆನ್ನೈ ನಡುವಿನ ಅಂತರ 300 ಕಿಮೀ.ಯಿಂದ 262 ಕಿಮೀಗೆ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಬೆಂಗಳೂರು- ಚೆನ್ನೈ ಎಕ್ಸ್ಪ್ರೆಸ್ವೇ ಕಾಮಗಾರಿ ಪರಿಶೀಲಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ
#MysuruBengaluruExpressway pic.twitter.com/FeV2Bq2jpq
— Pratap Simha (@mepratap) January 5, 2023