ಭಟ್ಕಳ: ಎನ್.ಎಸ್.ಎಸ್ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ
Update: 2023-01-05 17:33 IST
ಭಟ್ಕಳ: ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ಎನ್.ಎಸ್.ಎಸ್ ಘಟಕದಿಂದ ರಾಷ್ಟ್ರೀಯ ಯುವ ದಿನದ ಪೂರ್ವಭಾವಿಯಾಗಿ ಭಟ್ಕಳದ ಸಾಗರ ರಸ್ತೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವು ಜರುಗಿತು.
ಭಟ್ಕಳ ಪುರಸಭೆಯ ಶ್ರೀಮತಿ ಸುಜಿಯಾ ಸುಮನ ರವರು ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿ, ಶ್ರೀ ಗುರು ಸುಧೀಂದ್ರ ಕಾಲೇಜಿನ ಎನ್.ಎಸ್.ಎಸ್ ಘಟಕವು ಉತ್ತಮ ಕಾರ್ಯವನ್ನು ನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಾಮಾಜಿಕ ಕಾಳಜಿಯುಳ್ಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕೇಂದು ಕರೆ ನೀಡಿದರು.
ಎನ್.ಎಸ್.ಎಸ್ ಸ್ವಯಂಸೇವಕರು ಭಟ್ಕಳದ ಶಂಶುದ್ದೀನ್ ಸರ್ಕಲ್ ನಿಂದ ಶ್ರೀ ಗುರು ಸುಧೀಂದ್ರ ಕಾಲೇಜಿನ ವರೆಗೆ ರಸ್ತೆಯನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿಸಿದರು.
ಈ ಸಂದರ್ಭದಲ್ಲಿ ಎನ್.ಎಸ್.ಎಸ್ ಸಂಯೋಜಕರಾದ ಶ್ರೀ ಶಾಂತರಾಯ ಜಿ, ಉಪ ಸಂಯೋಜಕರಾದ ಶ್ರೀ ವಿನಾಯಕ ನಾಯ್ಕ್, ಉಪಪ್ರಾಂಶುಪಾಲರಾದ ವಿಖ್ಯಾತ ಪ್ರಭು, ಉಪನ್ಯಾಸಕರು, ಸಿಬ್ಬಂದಿಗಳು, ಸ್ವಯಂಸೇವಕರು ಉಪಸ್ಥಿತರಿದ್ದರು.