ಉಡುಪಿಯ ಇಂದ್ರಾಳಿ ರೈಲ್ವೆ ಗೋಡೌನ್ ಬಳಿ ಬೆಂಕಿ ಅವಘಡ: ರೈಲ್ವೆ ಹಳಿಗೆ ಬಳಸುವ ರಬ್ಬರ್ ಬೆಂಕಿಗಾಹುತಿ, ಅಪಾರ ನಷ್ಟ
Update: 2023-01-05 18:30 IST
ಉಡುಪಿ: ಇಂದ್ರಾಳಿ ರೈಲ್ವೆ ಗೋಡೌನ್ ಬಳಿ ದಾಸ್ತಾನು ಇರಿಸಲಾಗಿದ್ದ ಲಕ್ಷಾಂತರ ರೂ. ಮೌಲ್ಯದ ರೈಲ್ವೆ ಹಳಿಗೆ ಬಳಸುವ ರಬ್ಬರ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ಗುರುವಾರ ನಡೆದಿದೆ.
ಘಟನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ರಬ್ಬರ್ ಬೆಂಕಿಗಾಹುತಿಯಾಗಿದೆ ಎಂದು ವರದಿ ತಿಳಿಸಿದೆ. ರಬ್ಬರ್‌ಗೆ ಬೆಂಕಿಬಿದ್ದ ಪರಿಣಾಮ ಇಂದ್ರಾಳಿ ಪರಿಸರದಲ್ಲಿ ದಟ್ಟ ಹೊಗೆ ಆವರಿಸಿತ್ತು.
ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕದಳದ ಸಿಬ್ಬಂದಿಗಳು ಬೆಂಕಿಯನ್ನು ಹತೋಟಿಗೆ ತರಲು ಹರಸಾಹಸಪಟ್ಟರು. ಎರಡು ಅಗ್ನಿಶಾಮಕ ವಾಹನ ಹಾಗೂ ಹತ್ತಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಉಡುಪಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಸಂತ್ ಕುಮಾರ್ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.