ಕುಕ್ಕರ್ ಸ್ಫೋಟ ಪ್ರಕರಣ: ಖಾಸಗಿ ಕಾಲೇಜಿನಲ್ಲಿ ಎನ್‌ಐಎ ಅಧಿಕಾರಿಗಳ ಪರಿಶೀಲನೆ
Update: 2023-01-05 21:54 IST
ಮಂಗಳೂರು, ಜ.5: ನಗರದ ನಾಗುರಿಯಲ್ಲಿ ನಡೆದ ಕುಕ್ಕರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಕಾಲೇಜೊಂದಕ್ಕೆ ಎನ್‌ಐಎ ಅಧಿಕಾರಿಗಳು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ವರದಿಯಾಗಿದೆ.
ಬೆಂಗಳೂರಿನಿಂದ 7 ಮಂದಿ ಎನ್‌ಐಎ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೆ ವಿದ್ಯಾರ್ಥಿಯೊಬ್ಬನನ್ನು ವಿಚಾರಣೆಗಾಗಿ ವಶಕ್ಕೆ ಪಡೆದು ತನಿಖೆಗೊಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.