×
Ad

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಸರಣಿ ಅಪಘಾತ: 9 ವಾಹನಗಳು ಜಖಂ

Update: 2023-01-06 16:16 IST

ಬೆಂಗಳೂರು, ಜ. 06; ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಸಮೀಪ ಸಂಭವಿಸಿದ ಸರಣಿ ಅಪಘಾತದಲ್ಲಿ 7 ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ವಿವಿಧ ವಾಹನಗಳಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಬೆಂಗಳೂರು ವಿಮಾನ ನಿಲ್ದಾಣದ ಸಮೀಪವೇ ನಡೆದ ಅಪಘಾತದಲ್ಲಿ 9 ವಾಹನಗಳು ಜಖಂಗೊಂಡಿವೆ ಎಂದು ತಿಳಿದು ಬಂದಿದೆ.

ಗಾಯಾಳುಗಳ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದಿಂದಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.

 

Similar News