ಉಡುಪಿ: ಜ.16ಕ್ಕೆ ತ್ರೈಮಾಸಿಕ ಕೆಡಿಪಿ ಸಭೆ
Update: 2023-01-06 18:22 IST
ಉಡುಪಿ: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಜ.16 ಸೋಮವಾರ ಬೆಳಗ್ಗೆ 10:30ಕ್ಕೆ ಮಣಿಪಾಲದ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ, ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.