ಮಂಗಳೂರು: ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹ ಅಗತ್ಯ: ಜಿಲ್ಲಾಧಿಕಾರಿ ರವಿಕುಮಾರ್
ಮಂಗಳೂರು: ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹ ನೀಡಿದಾಗ ಹಳ್ಳಿಗಾಡಿನ ಯುವ ಕ್ರೀಡಾಪ್ರತಿಭೆಗಳನ್ನು ಬೆಳಕಿಗೆ ತರಲು ಸುಲಭ ಸಾಧ್ಯವಾಗುತ್ತದೆ ಎಂದು ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅಭಿಪ್ರಾಯಪಟ್ಟರು.
ದ.ಕ.ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್ ಇಲಾಖೆಯ ವತಿಯಿಂದ ಶುಕ್ರವಾರ ನಗರದ ಕರಾವಳಿ ಮೈದಾನದಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ ಗಾ್ರುೀಣ ಕ್ರೀಡಾಕೂಟ-23ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಹಲವಾರು ಗ್ರಾಮೀಣ ಕ್ರೀಡೆಗಳು ನಶಿಸಿ ಹೋಗುತ್ತಿರುವ ಇಂದಿನ ದಿನಗಳಲ್ಲಿ ಈ ರೀತಿಯ ಕ್ರೀಡಾಕೂಟಗಳನ್ನು ಆಯೋಜಿಸುವ ಮೂಲಕ ಅವುಗಳನ್ನು ಉಳಿಸಿಕೊಳ್ಳಬಹುದಾಗಿದೆ. ಈ ಕ್ರೀಡೆಗಳ ಬೆಳವಣಿಗೆಗಾಗಿ ಅಗತ್ಯ ನೆರವು ಹಾಗೂ ಸಹಕಾರವನ್ನು ನೀಡುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು.
ಮಂಗಳೂರು ತಾಪಂ ಇಒ ಲೋಕೇಶ್, ಸುಳ್ಯ ತಾಪಂ ಇಒ ಭವಾನಿ ಶಂಕರ್, ಬಂಟ್ವಾಳ ತಾಪಂ ಇಒ ವಿಷ್ಣು ಹೆಬ್ಬಾರ್, ಮಂಗಳೂರು ದಕ್ಷಿಣದ ರವಿಶಂಕರ್, ಮಂಗಳೂರು ಉತ್ತರದ ಭರತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿನಾಯಕ್ ಮತ್ತಿತರರು ಉಪಸ್ಥಿತರಿದ್ದರು.