VIDEO- ಕಾಂಗ್ರೆಸ್ ಗೆ 80 ಸೀಟೂ ಬರಲ್ಲ ಎಂದ KGF ಬಾಬುಗೆ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತರಿಂದ ತರಾಟೆ
ಬೆಂಗಳೂರು, ಜ.6: 'ಕೆಪಿಸಿಸಿ ಕಚೇರಿಯಲ್ಲಿ ಇರುವವರು ಸರಿಯಿಲ್ಲ. ಇಲ್ಲಿ ಬಂದವರಿಗೆ ಮರ್ಯಾದೆ ಸಿಗುತ್ತಿಲ್ಲ. ಹೀಗಾದ್ರೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 80 ಸ್ಥಾನ ಕೂಡ ಬರಲ್ಲ ' ಎಂದು ಹೇಳಿದ KGF ಬಾಬು ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ತರಾಟೆಗೆ ತೆಗದುಕೊಂಡಿರುವ ಘಟನೆ ನಡೆದಿದೆ.
ಶುಕ್ರವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಗೆ ಆಗಮಿಸಿದ ಕೆಜಿಎಫ್ ಬಾಬು, ಬಹಿರಂಗವಾಗಿಯೇ ಕಾಂಗ್ರೆಸ್ ನವರು ಓವರ್ ಕಾನ್ಫಿಡೆನ್ಸ್ ನಲ್ಲಿ ಇದ್ದಾರೆ. ಹೀಗಾದ್ರೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 80 ಸ್ಥಾನ ಕೂಡ ಬರಲ್ಲ. ಕೆಪಿಸಿಸಿ ಅಧ್ಯಕ್ಷರು ಪತ್ನಿ, ಮಕ್ಕಳನ್ನು ಬಿಟ್ಟು ಕೆಲಸ ಮಾಡ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರೂ ಸಹ ಹಗಲಿರುಳು ಕೆಲಸ ಮಾಡುತ್ತಿದ್ದರೆ ಕೆಪಿಸಿಸಿ ಕಚೇರಿಯಲ್ಲಿ ಇರುವವರು ಯಾರೂ ಸರಿಯಿಲ್ಲ. ಇಲ್ಲಿ ಬಂದವರಿಗೆ ಮರ್ಯಾದೆ ಕೊಡಲ್ಲ' ಎಂದು ಹೇಳಿದ್ದಾರೆ.
ಈ ವೇಳೆ ಅಲ್ಲಿದ್ದ ಕೆಲ ಕಾರ್ಯಕರ್ತರು ಬಾಬು ಅವರನ್ನು ಕೆಪಿಸಿಸಿ ಕಚೇರಿಯಿಂದ ಹೊರಗೆ ಕಳುಹಿಸಿದ ಪ್ರಸಂಗವೂ ನಡೆದಿದೆ.