ಕುಂದಾಪುರ: ಲಾಸ್ಯ ಮಧ್ಯಸ್ಥ ಯೋಗಾಸನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
Update: 2023-01-06 19:29 IST
ಕುಂದಾಪುರ: ಶಿವಮೊಗ್ಗ ಜಿಲ್ಲೆ ಶಾಲಾ ಶಿಕ್ಷಣ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರ ಕಛೇರಿ ಮತ್ತು ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆ ಇವರ ಜಂಟಿ ಆಶ್ರಯದಲ್ಲಿ ನಡೆದ 14-17ರ ವಯೋಮಿತಿಯೊಳಗಿನ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ ಬಾಲಕಿಯರ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕುಂದಾಪುರ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಲಾಸ್ಯ ಮಧ್ಯಸ್ಥ ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಈಕೆ ಕುಂದಾಪುರದ ಅರುಣ್ ಮತ್ತು ಲತಾ ಮಧ್ಯಸ್ಥ ದಂಪತಿಗಳ ಪುತ್ರಿ. ಈ ಸಾಧನೆಗೆ ಶಾಲಾ ಜಂಟಿ ಕಾರ್ಯದರ್ಶಿಗಳಾದ ವಂ. ಸ್ಟ್ಯಾನಿ ತಾವ್ರೊ, ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯಿನಿ ಹಾಗೂ ಅಧ್ಯಾಪಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.