×
Ad

ಕಾಂಗ್ರೆಸ್ ನಿಂದ ಕೆಜಿಎಫ್ ಬಾಬು ಅಮಾನತು

Update: 2023-01-06 21:18 IST

ಬೆಂಗಳೂರು,ಜ.6: ಪಕ್ಷಕ್ಕೆ ಹಾನಿಯುಂಟು ಮಾಡುತ್ತಿದ್ದ ಹಾಗೂ ಪಕ್ಷದ ಹಿನ್ನಡೆಗೆ ಕಾರಣವಾಗುವಂಥ ಹೇಳಿಕೆಗಳನ್ನು ನೀಡಿರುವ ಹಿನ್ನೆಲೆಯಲ್ಲಿ ಕೆಜಿಎಫ್ ಬಾಬು ಯಾನೆ ಯೂಸುಫ್ ಷರೀಫ್ ಅವರನ್ನು ಅಮಾನತ್ತು ಮಾಡಲಾಗಿದೆ.. 

ಶುಕ್ರವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಗೆ ತೆರಳಿದ್ದ ಕೆಜಿಎಫ್ ಬಾಬು,  ಬಹಿರಂಗವಾಗಿಯೇ ಕಾಂಗ್ರೆಸ್ ನವರು ಓವರ್ ಕಾನ್ಫಿಡೆನ್ಸ್ ನಲ್ಲಿ ಇದ್ದಾರೆ. ಹೀಗಾದ್ರೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 80 ಸ್ಥಾನ ಕೂಡ ಬರಲ್ಲ ಎಂದು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದರು. ಈ ಘಟನೆಯ ಬೆನ್ನಲ್ಲೇ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.  

ಈ ಸಂಬಂಧ ಕೆಜಿಎಫ್ ಬಾಬುಗೆ ಪತ್ರ ಬರೆದಿರುವ ಕಾಂಗ್ರೆಸ್ ಪಕ್ಷದ ಶಿಸ್ತು ಪಾಲನಾ ಸಮಿತಿಯ ಅಧ್ಯಕ್ಷ ಡಾ.ಕೆ.ರಹ್ಮಾನ್ ಖಾನ್, ಪಕ್ಷದ ನೀತಿ ವಿರುದ್ಧವಾಗಿ ಮಾಧ್ಯಮದವರಿಗೆ ವಿವಿಧ ರೀತಿಯ ಹೇಳಿಕೆ ನೀಡಿರುವ ಬಗ್ಗೆ ಮೂರು ತಿಂಗಳ ಹಿಂದೆಯೆ ತಮಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಈ ನೋಟಿಸ್‍ಗೆ ಸಮಂಜಸ ಉತ್ತರವನ್ನು ತಾವು ನೀಡಲಿಲ್ಲ ಎಂದು ತಿಳಿಸಿದ್ದಾರೆ.

ಅಲ್ಲದೆ, ಇಂದು ಸ್ವಯಂಪ್ರೇರಿತವಾಗಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಅಧ್ಯಕ್ಷರ ಪೂರ್ವಾನುಮತಿ ಇಲ್ಲದೆ ಕಾಂಗ್ರೆಸ್ ಪಕ್ಷವನ್ನು ಉದ್ದೇಶಿಸಿ ವಿವಿಧ ಹೇಳಿಕೆಗಳನ್ನು ಮಾಧ್ಯಮಗಳಿಗೆ ನೀಡಿದ್ದೀರಾ. ನಿಮ್ಮ ಈ ನಡೆಯು ಪಕ್ಷಕ್ಕೆ ಹಾನಿಯುಂಟು ಮಾಡುತ್ತಿದೆ ಹಾಗೂ ಪಕ್ಷದ ಹಿನ್ನಡೆಗೆ ಕಾರಣವಾಗುತ್ತಿದೆ ಎಂದು ಗಂಭೀರವಾಗಿ ಪರಿಗಣಿಸಿ, ಈ ಕೂಡಲೆ ನಿಮ್ಮನ್ನು ಪಕ್ಷದಿಂದ ಅಮಾನತ್ತುಗೊಳಿಸಲಾಗಿದೆ ಎಂದು ರಹ್ಮಾನ್ ಖಾನ್ ತಿಳಿಸಿದ್ದಾರೆ.

Full View

Similar News