×
Ad

ಕಲಬುರಗಿ: ವ್ಯಕ್ತಿಯ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು

Update: 2023-01-07 15:22 IST

ಕಲಬುರಗಿ: ದುಷ್ಕರ್ಮಿಗಳು ವ್ಯಕ್ತಿಯೋರ್ವನ ಮೇಲೆ ಗುಂಡು ಹಾರಿಸಿರುವ ಘಟನೆ ಇಲ್ಲಿನ ಸಬ್ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿರುವುದಾಗಿ ವರದಿಯಾಗಿದೆ.

ಕಲಬುರಗಿ ನಗರದ ನಿವಾಸಿ ಚನ್ನವೀರ ಪಾಟೀಲ್ ಗುಂಡೇಟಿನಿಂದ ಗಾಯಗೊಂಡವರು ಎಂದು ತಿಳಿದುಬಂದಿದೆ. ಚನ್ನವೀರ ಪಾಟೀಲ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಮತ್ತು ಕಾಂಗ್ರೆಸ್ ಮುಖಂಡ ಸಂತೋಷ್ ಪಾಟೀಲ್ ದನ್ನೋರ್ ಸಹೋದರ ಎಂದು ತಿಳಿದುಬಂದಿದೆ.

ಕಲಬುರಗಿ ನಗರದ ನಗರದ ಆಳಂದ ಚೆಕ್ ಪೊಸ್ಟ್ ಬಳಿ ಬುಲೇರೋ ವಾಹನದಲ್ಲಿ ಆಗಮಿಸಿದ ದುಷ್ಕರ್ಮಿಗಳು ಚನ್ನವೀರ ಪಾಟೀಲ್ ಮೇಲೆ ಗುಂಡು ಹಾರಿಸಿದ್ದಾರೆ. ಪರಿಣಾಮ ಚನ್ನವಿರ ಕೈಗೆ ಗುಂಡು ತಾಗಿದ್ದು, ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಡಿಸಿಪಿ ಅಡ್ಡೂರು ಶ್ರೀನಿವಾಸಲು ಭೇಟಿ ನೀಡಿ ಪರಿಶೀಲನೆ ನಡೆಸಿ, ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Similar News