×
Ad

ಮಂಗಳೂರು: ಫೆ.11ಕ್ಕೆ ರಾಷ್ಟ್ರೀಯ ಲೋಕ್ ಅದಾಲತ್

Update: 2023-01-07 18:39 IST
Editor : Ashwani

ಮಂಗಳೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ರಾಜ್ಯಾದ್ಯಂತ ಫೆ. 11ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.

ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಿಗೆ ಪರಿಹಾರ ಕಂಡುಕೊಳ್ಳಲು ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್: www.kslsa.kar.nic.in ಅಥವಾ ಟೋಲ್ ಫ್ರೀ ಸಂಖ್ಯೆ:1800-425-90900ಅನ್ನು ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - Ashwani

contributor

Editor - Ashwani

contributor

Similar News