ಕುಂದಾಪುರ: ಜ.10ಕ್ಕೆ ಆರೋಗ್ಯ ತಪಾಸಣಾ ಮೇಳ
Update: 2023-01-07 18:57 IST
ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಉಡುಪಿ ಜಿಲ್ಲಾ ಘಟಕ, ಕುಂದಾಪುರ ತಾಲೂಕು ಶಾಖೆ ಮತ್ತು ಯೆನಪೋಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಮಂಗಳೂರು ಇವರ ಸಹಯೋಗದಲ್ಲಿ ಬೃಹತ್ ಆರೋಗ್ಯ ತಪಾಸಣಾ ಮೇಳ ಹಾಗೂ ಉಚಿತ ಮಹಿಳಾ ಸ್ವಾಸ್ಥ್ಯ ಸಂರಕ್ಷಣಾ ತಪಾಸಣಾ ಶಿಬಿರವು ಜ.10ರಂದು ಬೆಳಗ್ಗೆ 9:30ಕ್ಕೆ ಕುಂದಾಪುರ ಪದವಿ ಪೂರ್ವ ಕಾಲೇಜಿನ ಲಕ್ಷ್ಮೀ ನರಸಿಂಹ ರೋಟರಿ ಹಾಲ್‌ನಲ್ಲಿ ನಡೆಯಲಿದೆ.
ಶಿಬಿರವನ್ನು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಉದ್ಘಾಟಿಸಲಿದ್ದು, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಶಾಖೆಯ ಸಭಾಪತಿ ಎಸ್. ಜಯಕರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.