×
Ad

ಉಡುಪಿಯ ಪ್ರೇಕ್ಷಣೀಯ ಸ್ಥಳಗಳಿಗೆ ಇಲಾಖೆಯ ಕ್ಯೂಆರ್‌ಕೋಡ್ ಅಳವಡಿಕೆೆ: ಉದ್ಘಾಟನೆ

Update: 2023-01-07 20:17 IST

ಉಡುಪಿ: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಕರಾವಳಿ ವಿಕಿಮೀಡಿಯಾ ಮತ್ತು ವಿಕಿ ಇ-ಲರ್ನಿಂಗ್ ಕೋರ್ಸ್ ಅಜ್ಜರಕಾಡಿನ  ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದೊಂದಿಗೆ ಜಿಲ್ಲೆಯ 30 ಪ್ರೇಕ್ಷಣೀಯ ಸ್ಥಳಗಳಿಗೆ ಇಲಾಖೆಯ ಕ್ಯೂಆರ್‌ಕೋಡ್ ಬೋರ್ಡ್ ಅಳವಡಿಸಲಾಗುತ್ತಿದೆ.

ಇದರ ಉದ್ಘಾಟನಾ ಕಾರ್ಯಕ್ರಮ ಜನವರಿ 8ರಂದು ಅಪರಾಹ್ನ 12:30ಕ್ಕೆ ನಗರದ ಅಜ್ಜರಕಾಡು ಭುಜಂಗ ಪಾರ್ಕಿನಲ್ಲಿ ನಡೆಯಲಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Similar News