ಅಲ್ಜೀರಿಯಾ: ಕಾರು ಅಪಘಾತದಲ್ಲಿ ಒಂದೇ ಕುಟುಂಬದ 8 ಮಂದಿ ಮೃತ್ಯು

Update: 2023-01-07 16:53 GMT

ಅಲ್ಜೀರ್ಸ್, ಜ.7: ಪೂರ್ವ ಅಲ್ಜೀರಿಯಾದಲ್ಲಿ ಶನಿವಾರ ಸಂಭವಿಸಿದ ಕಾರು ಅಪಘಾತದಲ್ಲಿ 5 ಮಕ್ಕಳ ಸಹಿತ ಒಂದೇ ಕುಟುಂಬದ 8 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಬಾಟ್ನ ನಗರದ ಬಳಿ ಕುಟುಂಬದವರು ಪ್ರಯಾಣಿಸುತ್ತಿದ್ದ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ 8 ಮಂದಿ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ಜಖಂಗೊಂಡಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. 2021ರಲ್ಲಿ ಅಲ್ಜೀರಿಯಾದಲ್ಲಿ ಸುಮಾರು 22,000 ರಸ್ತೆ ಅಪಘಾತ ಸಂಭವಿಸಿದ್ದು 3,061 ಮಂದಿ ಮೃತಪಟ್ಟಿದ್ದು 29,763 ಮಂದಿ ಗಾಯಗೊಂಡಿದ್ದಾರೆ ಎಂದು ಸರಕಾರದ ಅಂಕಿಅಂಶ ತಿಳಿಸಿದೆ.

Similar News