×
Ad

ಬೆಂಗಳೂರು: ಹಿರಿಯ ಪತ್ರಕರ್ತ ಕೆ.ಸತ್ಯನಾರಾಯಣ ನಿಧನ

Update: 2023-01-08 12:15 IST

ಬೆಂಗಳೂರು, ಜ.8: ಹಿರಿಯ ಪತ್ರಕರ್ತ, ಕನ್ನಡ ಪ್ರಭ ದಿನಪತ್ರಿಕೆಯ ಮಾಜಿ ಸಂಪಾದಕ ಕೆ.ಸತ್ಯನಾರಾಯಣ ಜಯನಗರದ ಎಲ್ಲೈಸಿ ಕಾಲನಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ತಾಯ್ನಾಡು ಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಕಾಲಿರಿಸಿದ ಸತ್ಯನಾರಾಯಣ ಕನ್ನಡ ಪ್ರಭ ಪತ್ರಿಕೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ವಿವಿಧ ಹಂತಗಳಲ್ಲಿ ಕಾರ್ಯನಿರ್ವಹಿಸಿದ್ದರು. ಇಂಡಿಯನ್ ಎಕ್ಸ್ ಪ್ರೆಸ್ ನಲ್ಲೂ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದರು.

Similar News