×
Ad

ಮಂಗಳೂರು: ಮಾದಕ ವಸ್ತು ಗಾಂಜಾ ಸಹಿತ ಆರೋಪಿಯ ಸೆರೆ

Update: 2023-01-08 17:23 IST

ಮಂಗಳೂರು: ನಗರದ ಫ್ಲಾಟ್‌ವೊಂದರಲ್ಲಿ ಮಾದಕ ವಸ್ತುವಾದ ಗಾಂಜಾವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಸಾಗರೋತ್ತರ ಭಾರತೀಯ ಪ್ರಜೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ನೀಲ್ ಕಿಶೋರಿಲಾಲ್ ರಾಮ್‌ಜಿ ಶಾ (38)ಎಂದು ಗುರುತಿಸಲಾಗಿದೆ.

ಆರೋಪಿಯಿಂದ 2 ಕೆಜಿ ತೂಕದ 50,000 ರೂ. ಮೌಲ್ಯದ ಗಾಂಜಾ, 2 ಮೊಬೈಲ್ ಫೋನ್, 7,000 ರೂ., ಡಿಜಿಟಲ್ ತೂಕ ಮಾಪನ ಸಹಿತ 78 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯು ಅಕ್ರಮವಾಗಿ ಮಾದಕ ವಸ್ತುಗಳನ್ನು ವಿಶಾಖಪಟ್ಟಣದಿಂದ ಖರೀದಿಸಿಕೊಂಡು ಬಂದು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದನು ಎನ್ನಲಾಗಿದೆ.

ಮಂಗಳೂರು ಸಿಸಿಬಿ ಇನ್‌ಸ್ಪೆಕ್ಟರ್ ಶ್ಯಾಮ್ ಸುಂದರ್ ಎಚ್‌ಎಂ ನೇತೃತ್ವದ ಪೊಲೀಸರು ನಗರದ ಬಂಟ್ಸ್‌ಹಾಸ್ಟೆಲ್ ಪರಿಸರದ ಫ್ಲಾಟ್‌ವೊಂದಕ್ಕೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಹಲವು ಆರೋಪಿಗಳು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Similar News