ವಿಟ್ಲ: 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
Update: 2023-01-08 17:33 IST
ವಿಟ್ಲ, ಜ.8: ವಿದ್ಯಾರ್ಥಿಯೋರ್ವ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರವಿವಾರ ವರದಿಯಾಗಿದೆ.
ಪುಣಚ ಗ್ರಾಮದ ಮಣಿಲ ರವೀಂದ್ರ ಗೌಡ ಎಂಬವರ ಪುತ್ರ ಹೇಮಂತ್(14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.
ಪುಣಚ ದೇವಿನಗರ ಶ್ರೀ ದೇವಿ ವಿದ್ಯಾಕೇಂದ್ರದ ಪ್ರೌಢಶಾಲೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಈತ ಮನೆ ಮಂದಿಯೆಲ್ಲಾ ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಯ್ಯಪ್ಪ ವ್ರತಧಾರಿಗಳು ಇರುಮುಡಿ ಕಟ್ಟುವ ಕಾರ್ಯಕ್ರಮಕ್ಕೆ ಹೋಗಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆನ್ನಲಾಗಿದೆ.
ನಾಳೆ (ಸೋಮವಾರ) ಪರೀಕ್ಷೆ ಇರುವ ಕಾರಣ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದು, ದೇವಸ್ಥಾನಕ್ಕೆ ಬರುವುದಿಲ್ಲ ಎಂದು ಮನೆಯಲ್ಲಿಯೇ ಉಳಿದಿದ್ದ ಎಂದು ಹೇಳಲಾಗಿದೆ.