ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷನ ಚಿಕಿತ್ಸೆ ವೆಚ್ಚವನ್ನು ಸರಕಾರವೇ ಭರಿಸಲಿದೆ: ಸಿಎಂ ಬೊಮ್ಮಾಯಿ
ಬೆಳಗಾವಿ: ಗುಂಡಿನ ದಾಳಿ ಪ್ರಕರಣ
Update: 2023-01-08 19:35 IST
ಹಾವೇರಿ, ಜ.8: ಬೆಳಗಾವಿಯಲ್ಲಿ ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷರ ಮೇಲೆ ಗುಂಡಿನ ದಾಳಿ ಪ್ರಕರಣ ಸಂಬಂಧ ಗಾಯಾಳು ಚಿಕಿತ್ಸೆ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಶ್ರೀರಾಮ ಸೇನೆಯ ಅಧ್ಯಕ್ಷರ ಮೇಲೆ ಗುಂಡಿನ ದಾಳಿ ಪ್ರಕರಣ ಸಂಬಂಧ ಪೊಲೀಸರಿಗೆ ಈಗಾಗಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರನ್ನು ಬಂಧಿಸಿ ಕೂಡಲೇ ಕಾರ್ಯಾಚರಣೆ ಮಾಡಲು ಸೂಚಿಸಲಾಗಿದೆ ಎಂದರು.
ಅಲ್ಲದೆ, ಭಿನ್ನ ಅಭಿಪ್ರಾಯ ಇದ್ದ ಮಾತ್ರಕ್ಕೆ ಹಿಂಸೆಗೆ ಅವಕಾಶ ನೀಡಬಾರದು ಎಂದ ಅವರು, ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಚಿಕಿತ್ಸೆಯ ವೇಚ್ಚ ಭರಿಸಿ, ಅಪರಾಧಿಗಳನ್ನು ಬಂಧಿಸುವ ಕೆಲಸವನ್ನು ಪೊಲೀಸರು ಮಾಡುತ್ತಾರೆ ಎಂದು ಹೇಳಿದರು.