ಬೆಂಗಳೂರು | ಕೆಲಸಕ್ಕಿದ್ದ ಮನೆಯಿಂದಲೇ ಕಳವು: ಮಹಿಳೆಯ ಬಂಧನ, 2.30 ಲಕ್ಷ ರೂ.ಮೌಲ್ಯದ ಚಿನ್ನಾಭರಣ ವಶ

Update: 2023-01-08 14:18 GMT

ಬೆಂಗಳೂರು, ಜ.8: ಕೆಲಸ ಮಾಡುತ್ತಿದ್ದ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಮಹಿಳೆಯೊಬ್ಬರನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಅಮೃತಹಳ್ಳಿಯ ಮೋನಿಕಾ ಎಂದು ಗುರುತಿಸಲಾಗಿದೆ. ಬಂಧಿತೆ ಆರೋಪಿಯಿಂದ 2.30 ಲಕ್ಷ ರೂ. ಮೌಲ್ಯದ 40 ಗ್ರಾಂ ತೂಕದ ಚಿನ್ನಾಭರಣಗಳನ್ನು ಜಪ್ತಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಡಿಸಿಪಿ ಡಾ.ಅನೂಪ್ ಎ.ಶೆಟ್ಟಿ ತಿಳಿಸಿದ್ದಾರೆ.

ಅಮೃತಹಳ್ಳಿಯ ಸಂಗೀತಾ ರವರು ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮೋನಿಕಾ ಎಂಬ ಮಹಿಳೆಯು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾಳೆಂದು ನೀಡಿದ ದೂರನ್ನು ಪಡೆದು ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದರು. 

Similar News