×
Ad

ರಾಜ್ಯದ ಮೊದಲ ಯಕ್ಷಗಾನ ಸಮ್ಮೇಳನ: ಉಡುಪಿಯಲ್ಲಿ ನಾಳೆ ಕಚೇರಿ ಉದ್ಘಾಟನೆ

Update: 2023-01-08 20:01 IST

ಉಡುಪಿ: ರಾಜ್ಯದ ಮೊದಲ ಸಮಗ್ರ ಕರ್ನಾಟಕ ಯಕ್ಷಗಾನ ಸಮ್ಮೇಳನವು ಜನವರಿ 11 ಮತ್ತು 12ರಂದು ಉಡುಪಿಯ ಎಂಜಿಎಂ ಕಾಲೇಜು ಆವರಣದಲ್ಲಿ ನಡೆಯಲಿದ್ದು,  ಈ ಹಿನ್ನೆಲೆಯಲ್ಲಿ ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಯಕ್ಷಗಾನ ಸಮ್ಮೇಳನದ ಕೆಲಸ ಕಾರ್ಯಗಳನ್ನು ನಡೆಸಲು ತಾತ್ಕಾಲಿಕ ಕಚೇರಿಯನ್ನು ನಾಳೆ ತೆರೆಯಲಾಗುವುದು ಎಂದು ಮೂಲಗಳು ತಿಳಿಸಿವೆ. 

ಜ.9ರಂದು ಅಪರಾಹ್ನ 3:00 ಗಂಟೆಗೆ ಎಂಜಿಎಂ ಕಾಲೇಜಿನ ಆವರಣದ  ರವೀಂದ್ರ ಮಂಟಪದ ಹಿಂಭಾಗದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ತಾತ್ಕಾಲಿಕ ಕಚೇರಿಯ ಉದ್ಘಾಟನೆಯನ್ನು ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಹಾಗೂ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನದ ಸಲಹಾ ಸಮಿತಿಯ ಅಧ್ಯಕ್ಷ ವಿ.ಸುನಿಲ್ ಕುಮಾರ್ ನೆರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ. 

ಇದೇ ಸಂದರ್ಭದಲ್ಲಿ ಯಕ್ಷಗಾನ ಸಮ್ಮೇಳನಾಧ್ಯಕ್ಷರ ಘೋಷಣೆ ಮತ್ತು ಯಕ್ಷಗಾನ ಸಮ್ಮೇಳನದ ಲಾಂಛನ ಬಿಡುಗಡೆ ನಡೆಯಲಿದೆ. ಈ ಸಮಾರಂಭದಲ್ಲಿ ಶಾಸಕ ರಘುಪತಿ ಭಟ್, ಯಕ್ಷಗಾನ ಸಮ್ಮೇಳನದ ಕಾರ್ಯಾಧ್ಯಕ್ಷ ಡಾ.ಜಿ.ಎಲ್.ಹೆಗಡೆ ಹಾಗೂ ಯಕ್ಷಗಾನ ಸಮ್ಮೇಳನದ ಸಲಹಾ ಸಮಿತಿಯ ಸದಸ್ಯರುಗಳು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ರಿಜಿಸ್ಟ್ರಾರ್ ಪ್ರಕಟಣೆ ತಿಳಿಸಿದೆ.

Similar News