×
Ad

ಉಡುಪಿ: ಇಂದು ಶಿಶಿಕ್ಷು ಮೇಳ

Update: 2023-01-08 20:04 IST

ಉಡುಪಿ: ಕೌಶಲ್ಯ ಅಭಿವೃಧ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮಂತ್ರಾಲಯ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಉಡುಪಿ ಜಿಲ್ಲೆ, ಸರಕಾರಿ, ಅನುದಾನಿತ  ಮತ್ತು ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಸಹಯೋಗದೊಂದಿಗೆ ಶಿಶಿಕ್ಷು ಮೇಳ-2023 ಜ.9 ರಂದು  ಬೆಳಗ್ಗೆ 9:30ಕ್ಕೆ ಚಿಟ್ಪಾಡಿಯ ಸೈಂಟ್ ಮೇರಿಸ್ ಅನುದಾನಿತ ಮತ್ತು ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಉದ್ಘಾಟಿಸಲಿದ್ದು,  ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Similar News