ಸುಳ್ಯ: ಯುವಕನ ಮೇಲೆ ತಂಡದಿಂದ ಹಲ್ಲೆ ಪ್ರಕರಣ; ಇಬ್ಬರ ಬಂಧನ
Update: 2023-01-08 20:25 IST
ಸುಳ್ಯ: ಯುವತಿಯ ಜೊತೆ ತಿರುಗಾಡುತ್ತಿದ್ದ ಎಂದು ಆರೋಪಿಸಿ ಯುವಕನೋರ್ವನಿಗೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ರಾಧಾಕೃಷ್ಣ (45), ವಿಶ್ವಾಸ್ ಎನ್. (19) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ಜ.5ರಂದು ಕಲ್ಲುಗುಂಡಿಯ ಹಫೀದ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಸುಬ್ರಹ್ಮಣ್ಯದ ವಿದ್ಯಾರ್ಥಿನಿಯೋರ್ವಳನ್ನು ಭೇಟಿಯಾಗಲು ಸುಬ್ರಹ್ಮಣ್ಯಕ್ಕೆ ಬಂದಿದ್ದ ವೇಳೆ ತಂಡವೊಂದು ಹಫೀದ್ ನನ್ನು ಜೀಪಿನಲ್ಲಿ ಕೂಡಿ ಹಾಕಿ ಕುಮಾರಧಾರ ಬಳಿಯ ಹಳೆ ಕಟ್ಟಡದ ಕೋಣೆಯೊಳಗೆ ಕೂಡಿ ಹಾಕಿ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿತ್ತು.
ಘಟನೆಯಿಂದ ಗಾಯಗೊಂಡ ಹಫೀದ್ ಸುಳ್ಯ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಹಾಗೂ ಸುಬ್ರಹ್ಮಣ್ಯ ಠಾಣೆಗೆ ಸುಮಾರು 10-12 ಜನ ಅಪರಿಚಿತರು ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಿದ್ದ. ಇದೀಗ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.