×
Ad

ವಂಚನೆ ಪ್ರಕರಣ: ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್ ಬಂಧನ ಕಾನೂನಿಗೆ ಅನುಗುಣವಾಗಿಲ್ಲ ಎಂದ ಹೈಕೋರ್ಟ್

Update: 2023-01-09 11:12 IST

ಹೊಸದಿಲ್ಲಿ: ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಹಾಗೂ  ಅವರ ಪತಿ ದೀಪಕ್ ಕೊಚ್ಚರ್ ಅವರ ಬಂಧನಗಳು ಕಾನೂನಿನ ಪ್ರಕಾರವಾಗಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದ ನಂತರ ಐಸಿಐಸಿಐ ಬ್ಯಾಂಕ್-ವಿಡಿಯೋಕಾನ್ ವಂಚನೆ ಪ್ರಕರಣದಲ್ಲಿ  ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು NDTV ವರದಿ ಮಾಡಿದೆ.

 ಚಂದಾ ಕೊಚ್ಚರ್ ಖಾಸಗಿ ವಲಯದ ಬ್ಯಾಂಕ್‌ನ ಮುಖ್ಯಸ್ಥರಾಗಿದ್ದಾಗ ವಿಡಿಯೋಕಾನ್ ಗ್ರೂಪ್‌ಗೆ ಒದಗಿಸಿದ  3,000 ಕೋಟಿ ರೂ. ಹೆಚ್ಚು ಸಾಲದಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪದ ಪ್ರಕರಣದಲ್ಲಿ ಡಿಸೆಂಬರ್ 23 ರಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಅವರನ್ನು ಬಂಧಿಸಿತ್ತು.

ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿ ತನ್ನ ಬಂಧನ ಕಾನೂನುಬಾಹಿರವಾಗಿದೆ, ತನಿಖೆಯನ್ನು ಆರಂಭಿಸಲು ಕಾಯಿದೆಯ ಸೆಕ್ಷನ್ 17A ಅಡಿಯಲ್ಲಿ ಅನುಮತಿ ಕಡ್ಡಾಯವಾಗಿದೆ ಹಾಗೂ ಈ ತನಿಖೆಯನ್ನು ಪ್ರಾರಂಭಿಸಲು ಸಂಸ್ಥೆಯು ಅಂತಹ ಯಾವುದೇ ಅನುಮತಿಯನ್ನು ಪಡೆದಿಲ್ಲ ಎಂದು ಕೊಚ್ಚರ್‌ ದಂಪತಿ ನ್ಯಾಯಾಲಯದ ಮುಂದೆ ವಾದಿಸಿದರು.

Similar News