ಬಿಜೆಪಿಯಿಂದ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ: ಸಿದ್ದರಾಮಯ್ಯ ಪ್ರತಿಕ್ರಿಯೆ ಏನು?
ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ಬಿಜೆಪಿ ‘ಸಿದ್ದು ನಿಜ ಕನಸುಗಳು’ ಎನ್ನುವ ಪುಸ್ತಕ ಬಿಡುಗಡೆಗೆ ಮುಂದಾಗಿದ್ದು, ಬೆಂಗಳೂರಿನ ಪುರಭವನದಲ್ಲಿ ಇಂದು ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಿದೆ.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಬಿಜೆಪಿಯವರಿಗೆ ಎಲ್ಲ ಹಳದಿಯಾಗಿ ಕಾಣುತ್ತದೆ. ಟಿಪ್ಪು ಖಡ್ಗ ಹಿಡಿದುಕೊಂಡು ಡ್ರೆಸ್ ಹಾಕಿದ್ದವರು ಯಾರು? ನನ್ನ ತೇಜೋವಧೆ ಮಾಡಲು ಹೀಗೆಲ್ಲಾ ಮಾಡುತ್ತಿದ್ದಾರೆ. ಇದರ ವಿರುದ್ಧ ಕಾನೂನು ಹೋರಾಟ ಹೂಡುತ್ತೇನೆ ಎಂದು ಎಚ್ಚರಿಕೆ ನೀಡಿದರು.
ಚುನಾವಣೆ ಹತ್ತಿರ ಬರುತ್ತಿದ್ದಂತೆ ನನ್ನ ತೇಜೋವಧೆ ಮಾಡಲು ಇಂಥ ಕೆಲಸ ಮಾಡುತ್ತಿದ್ದಾರೆ ಎಂದ ಅವರು, ಈ ಹಿಂದೆ ಬಿಎಸ್‌ವೈ, ಕರಂದ್ಲಾಜೆ ಟಿಪ್ಪು ಥರ ಖಡ್ಗ ಹಿಡಿದು ಡ್ರೆಸ್ ಹಾಕಿ ಪೋಸ್ ಕೊಟ್ಟಿದ್ರಲ್ಲ ಎಂದು ತಿರುಗೇಟು ನೀಡಿದರು.
ಇದನ್ನೂ ಓದಿ; ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ಕಾರ್ಯಕ್ರಮ ರದ್ದುಪಡಿಸುವಂತೆ ಕಾಂಗ್ರೆಸ್ ದೂರು