ಪಂಜಾಬ್‌: ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಸೇನೆಯ ಲೆಫ್ಟಿನೆಂಟ್ ಕರ್ನಲ್

Update: 2023-01-09 07:42 GMT

ಹೊಸದಿಲ್ಲಿ: ಪಂಜಾಬ್‌ನ ಫಿರೋಝ್ ಪುರ ಮೂಲದ ಭಾರತೀಯ ಸೇನೆಯ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ನಿನ್ನೆ ರಾತ್ರಿ ತನ್ನ ಪತ್ನಿಯನ್ನು ಕೊಲೆ ಮಾಡಿ ನಂತರ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಅಧಿಕಾರಿ ಸೂಸೈಡ್ ನೋಟ್ ಬರೆದಿದ್ದು, ಅಲ್ಲಿ ತನ್ನ ಪತ್ನಿಯನ್ನು ಹತ್ಯೆಗೈದಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸೇನಾಧಿಕಾರಿಯ ನಿವಾಸದಲ್ಲಿ ಮಹಿಳೆ ಶವವಾಗಿ ಪತ್ತೆಯಾಗಿದ್ದಾರೆ.

ದಂಪತಿಗಳು ವೈವಾಹಿಕ ಸಮಸ್ಯೆಗಳನ್ನು ಹೊಂದಿದ್ದರು ಹಾಗೂ  ನಿಯಮಿತವಾಗಿ ಆಪ್ತ ಸಮಾಲೋಚನೆಗೆ ಒಳಗಾಗುತ್ತಿದ್ದರು ಎಂದು ಮೂಲಗಳು ತಿಳಿಸಿದ್ದು. ಸೇನೆ ಹಾಗೂ ಪಂಜಾಬ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Similar News